

ಬೆಂಗಳೂರು: ಅಮಾನತ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಮತ್ತು ಅಮಿನ್ ಹೌಸಿಂಗ್ ಡೆವಲಪ್ಮೆಂಟ್ ಕಂಪನಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. ಜತೆಗೆ ಇಬ್ಬರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಅಮಿನ್ ಹೌಸಿಂಗ್ ಡೆವಲಪ್ಮೆಂಟ್ ಕಂಪನಿ ಮತ್ತು ಅಮಾನತ್ ಕೋ-ಆಪರೇಟಿವ್ ಬ್ಯಾಂಕ್ ಲಿ. ವಂಚನೆ ಪ್ರಕರಣ ಸಂಬಂಧ ವಿಶೇಷ ನ್ಯಾಯಾಲಯಕ್ಕೆ (ಪಿಎಂಎಲ್ಎ) ಇಡಿ ಸಲ್ಲಿಸಿದ ಚಾರ್ಜ್ಶೀಟ್ನ್ನು ಪರಿಗಣಿಸಿದೆ. ಅಲ್ಲದೆ, ಆರೋಪಿಗಳಾದ ಮೊಹಮ್ಮದ್ ಅಸಾದುಲ್ಲಾ ಮತ್ತು ಓರ್ಸಗೆ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಇಡಿ ತನಿಖೆ ಕೈಗೊಂಡಿದೆ. ಈಗಾಗಲೇ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ ಮೊಹಮ್ಮದ್ ಅಸಾದುಲ್ಲಾ ಮತ್ತು ಓರ್ಸ ವಿರುದ್ಧ 2006ರಲ್ಲಿ ನ್ಯಾಯಾಲಯಕ್ಕೆ 5 ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
1985ರಿಂದ 2002ರ ಅವಧಿಯಲ್ಲಿ ಆರೋಪಿಗಳು ಅಸ್ತಿತ್ವದಲ್ಲಿ ಇಲ್ಲದ ಮತ್ತು ನಕಲಿ ಖಾತೆದಾರರಿಗೆ ಅಪಾರ ಪ್ರಮಾಣದ ಸಾಲವನ್ನು ಮಂಜೂರು ಮಾಡಿ ಚೆಕ್ ಮತ್ತು ಡಿಡಿ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅಮಾನತ್ ಸಹಕಾರಿ ಬ್ಯಾಂಕ್ ಹಣವನ್ನು ದುರ್ಬಳಕ್ಕೆ ಮಾಡಿಕೊಂಡಿದ್ದರು.
ಸಾಲದ ರೂಪದಲ್ಲಿ ಬ್ಯಾಂಕ್ಯಿಂದ ಪಡೆದ ಹಣವನ್ನು ತಮ್ಮ ವೈಯಕ್ತಿಕ ಉದ್ದೇಶಕ್ಕೆ ಬಳಸುವುದರ ಮೂಲಕ ಮತ್ತು ಸಂಬಂಧಿಕರ ಹೆಸರಿನಲ್ಲಿ ಸ್ಥಿರ ಆಸ್ತಿಗಳಲ್ಲಿ ಹೂಡಿಕೆ ಮಾಡಿದ್ದರು. ಈಗಾಗಲೇ ಆರೋಪಿತರ 68.43 ಕೋಟಿ ರೂ. ಜಪ್ತಿ ಮಾಡಲಾಗಿದೆ. ಇದರ ಪ್ರಸ್ತುತ ಮಾರುಕಟ್ಟೆ ಮೌಲ್ಯ 243.93 ಕೋಟಿ ರೂ. ಆಗಿದೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.