More

    ಜಾರಿ ನಿರ್ದೇಶನಾಲಯ ಮನರಂಜನಾ ಇಲಾಖೆ ಎಂದ ಮದ್ಯನೀತಿ ಹಗರಣ ಆರೋಪಿ ಸಂಜಯ್ ಸಿಂಗ್​; ಇಂದೇನಾಯ್ತು?

    ನವದೆಹಲಿ: ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆಮ್​ ಆದ್ಮಿ ಪಕ್ಷದ ಮುಖಂಡ, ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್, ಇದೀಗ ಜಾರಿ ನಿರ್ದೇಶನಾಲಯದ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾದ ದೆಹಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆ ಸಂದರ್ಭದಲ್ಲೇ ಅವರು ಈ ಆರೋಪ ಮಾಡಿದ್ದಾರೆ.

    ಮೂರು ದಿನಗಳ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಂಜಯ್ ಸಿಂಗ್ ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರ ಮುಂದೆ ಇಂದು ಹಾಜರುಪಡಿಸಲಾಯಿತು.

    ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಎನ್​ಫೋರ್ಸ್​ಮೆಂಟ್ ಡೈರೆಕ್ಟೋರೇಟ್-ಇಡಿ) ವಿರುದ್ಧವೇ ಆರೋಪ ಮಾಡಿದ ಸಂಜಯ್ ಸಿಂಗ್, ಅದಾನಿ ವಿರುದ್ಧ ನೀಡಿದ ದೂರಿನ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಕ್ರಮ ಕೈಗೊಂಡಿಲ್ಲ ಎಂದರು.

    ಇದನ್ನೂ ಓದಿ: ಖಿನ್ನತೆ ತಲೆಯ ಸಮಸ್ಯೆ, ಅದಾಗ್ಯೂ ಪರಿಹಾರ ಕಾಲುಗಳಲ್ಲಿದೆ!; ಅಧ್ಯಯನದಲ್ಲಿ ಬಹಿರಂಗ

    ಆಗ ನ್ಯಾಯಾಲಯದ ಒಳಗೆ ಸಂಬಂಧವಿಲ್ಲದ ವಿಷಯಗಳನ್ನು ಚರ್ಚಿಸದಂತೆ ಅಥವಾ ಭಾಷಣ ಮಾಡದಂತೆ ನ್ಯಾಯಾಧೀಶರು ಸೂಚಿಸಿದರು. ಆಗ ತಮ್ಮ ಪ್ರಕರಣದಲ್ಲೂ ಇಡಿ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲಿಲ್ಲ. ಅದು ಎಂಟರ್​​ಟೇನ್​ಮೆಂಟ್ ಡಿಪಾರ್ಟ್​ಮೆಂಟ್ ಆಗಿದೆ ಎಂದರು. ನಂತರ ಸಂಜಯ್ ಸಿಂಗ್​​ಗೆ ಅ. 27ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಮದ್ಯ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅ.4ರಂದು ದೆಹಲಿಯ ನಾರ್ತ್ ಅವೆನ್ಯೂ ಪ್ರದೇಶದಲ್ಲಿನ ಸಂಜಯ್ ಸಿಂಗ್​ ನಿವಾಸದಲ್ಲಿ ಶೋಧ ನಡೆಸಿದ ನಂತರ ಅವರನ್ನು ಬಂಧಿಸಿತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ಗಳ ಅಡಿಯಲ್ಲಿ ಸಿಂಗ್ ಅವರನ್ನು ಬಂಧಿಸಲಾಗಿದೆ.

    ಹೈ ಅಲರ್ಟ್​: ವಿದ್ಯಾರ್ಥಿಗಳ ಮೇಲೆ ಅಪರಿಚಿತರಿಂದ ವಿಚಿತ್ರ ಲಿಕ್ವಿಡ್ ಸ್ಪ್ರೇ!; ಮೈಗೆ ತಾಕುತ್ತಿದ್ದಂತೆ ಅಲರ್ಜಿ..

    ಹಮಾಸ್ ದಾಳಿ: ಇದು ಬರ್ಬರ ಕ್ರೌರ್ಯದ ಅಬ್ಬರ; ದುರ್ಬಲ ಹೃದಯದವರು ಈ ಲಿಂಕ್ ತೆರೆಯಬೇಡಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts