More

    ಶ್ರೀಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ; 114.19 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

    ಬೆಂಗಳೂರು: ಶ್ರೀಗುರುರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಅರ್ಥಾತ್, ಜಾರಿ ನಿರ್ದೇಶನಾಲಯ (ಇ.ಡಿ.) ಈ ವಿಚಾರದಲ್ಲಿ ಮಹತ್ವದ ಕ್ರಮವೊಂದನ್ನು ಕೈಗೊಂಡಿದೆ.

    ಸಾರ್ವಜನಿಕ ಠೇವಣಿಗಳ ದುರುಪಯೋಗಕ್ಕೆ ಸಂಬಂಧಿಸಿದಂತೆ ಶ್ರೀಗುರುರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ವಿವಿಧ ಸುಸ್ತಿ ಸಾಲಗಾರರಿಗೆ ಸಂಬಂಧಿಸಿದ 114.19 ಕೋಟಿ ರೂ. ಆಸ್ತಿಯನ್ನು ಪಿಎಂಎಲ್​-2002ರ ಅನ್ವಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ.

    ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಖಾಲಿ ಜಾಗ, ವಸತಿ, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳು ಹಾಗೂ 3.15 ಕೋಟಿ ಬ್ಯಾಂಕ್​ ಬ್ಯಾಲೆನ್ಸ್​ ಸಹಿತ ಒಟ್ಟು 21 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಶ್ರೀಗುರುರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ವಿರುದ್ಧ ದೊಡ್ಡ ಪ್ರಮಾಣದ ಹಗರಣದ ಆರೋಪವಿದ್ದು, ಇದಕ್ಕೆ ಸಂಬಂಧಿಸಿದ್ದಂತೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಲ್ಲದೆ ತಮ್ಮ ಹಣ ಹಿಂದಿರುಗಿಸಿ ಎಂದು ಕೆಲ ಕಾಲದಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

    ಚುನಾವಣಾ ಆಯೋಗಕ್ಕೆ ವಿಶೇಷ ಮನವಿ: ಜಾರಿಯಾಗುತ್ತಾ ಹೊಸ ಸೂಚನೆ?

    ಭಾರಿ ಅನಾಹುತದಿಂದ ಪಾರಾದ ಸಿಎಂ, ಸಚಿವ ಸುಧಾಕರ್: ಸ್ವಲ್ಪ ಎಡವಟ್ಟಾಗಿದ್ದರೂ ಹೆಲಿಕಾಪ್ಟರ್ ಕಟ್ಟಡಕ್ಕೆ ಡಿಕ್ಕಿ?!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts