ಅಕ್ರಮ ಹಣ ವರ್ಗಾವಣೆ; ಆರನೇ ಬಾರಿ ಅರವಿಂದ್​ ಕೇಜ್ರಿವಾಲ್​ಗೆ ಸಮನ್ಸ್​ ಜಾರಿ ಮಾಡಿದ ED

Arvind Kejriwal
Published on

ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿ ಮಾಡಿದೆ.

ಫೆಬ್ರವರಿ 19ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಲಾಗಿರುವ ಸಮನ್ಸ್​ನಲ್ಲಿ ಸೂಚಿಸಲಾಗಿದೆ. ಅಬಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್​ಗೆ ಜಾರಿ ಮಾಡಲಾಗಿರುವ ಆರನೇ ನೋಟಿಸ್​ ಇದಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅನೇಕ ಬಾರಿ ನೋಟಿಸ್​ ಜಾರಿ ಮಾಡಿದ್ದು, ವಿಚಾರಣೆಗೆ ಕೇಜ್ರಿವಾಲ್​ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ED ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು. ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಾಲಯವು ಫೆಬ್ರವರಿ 17ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್​ಗೆ ಸೂಚಿಸಿತ್ತು.

ಈ ಹಿಂದೆ ನವೆಂಬರ್ 02, ಡಿಸೆಂಬರ್ 21, ಜನವರಿ 03, 18 ಹಾಗೂ ಫೆಬ್ರವರಿ 02ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್​ ಜಾರಿ ಮಾಡಿತ್ತು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಕೇಜ್ರಿವಾಲ್​ ಇದೊಂದು ಸುಳ್ಳು ಪ್ರಕರಣವಾಗಿದ್ದು, ತಾವು ವಿಚಾರಣೆಗೆ ಹಾಜರಾಗುವುದಿಲ್ಲ ಎಂದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net