More

    ಅಕ್ರಮ ಹಣ ವರ್ಗಾವಣೆ ಪ್ರಕರಣ; ಫಾರೂಕ್ ಅಬ್ದುಲ್ಲಾಗೆ ED ಸಮನ್ಸ್​ ಜಾರಿ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಗೆ (JKCA) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನ್ಯಾಷನಲ್ ಕಾನ್ಫರೆನ್ಸ್ (NC) ಅಧ್ಯಕ್ಷ ಫಾರೂಕ್ ಅಬ್ದುಲ್ಲಾಗೆ ಜಾರಿ ನಿರ್ದೇಶನಾಲಯ ಸಮನ್ಸ್​ ಜಾರಿ ಮಾಡಿದೆ.

    ಮಂಗಳವಾರ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಿರುವ ಸಮನ್ಸ್​ನಲ್ಲಿ ತಿಳಿಸಲಾಗಿದೆ.

    ಇದನ್ನೂ ಓದಿ: ಮಾವನ ಆರೋಪಕ್ಕೆ ಕೆರಳಿದ ರಿವಾಬಾ; ಅಷ್ಟಕ್ಕೂ ಜಡೇಜಾ ಪತ್ನಿ ಹೇಳಿದ್ದೇನು

    ಈ ಹಿಂದೆ ಜನವರಿ 11ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಲಾಗಿತ್ತು. ಆದರೆ, ಫಾರೂಕ್​ ವಿಚಾರಣೆಗೆ ಹಾಜರಾಗಿರಲಿಲ್ಲ. ಮಂಗಳವಾರವೂ ವಿಚಾರಣೆಗೆ ಹಾಜರಾಗುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗಿದೆ.

    ಪ್ರಕರಣದ ಹಿನ್ನಲೆ

    JKCA ಪದಾಧಿಕಾರಿಗಳು ಸೇರಿದಂತೆ ಸಂಬಂಧವಿಲ್ಲದವರ ವೈಯಕ್ತಿಕ ಖಾತೆಗೆ ವರ್ಗಾವಣೆ ಮಾಡುವ ಮೂಲಕ ಮತ್ತು ಅದರ ಬ್ಯಾಂಕ್ ಖಾತೆಗಳಿಂದ ನಗದು ಹಿಂಪಡೆಯುವ ಮೂಲಕ JKCA ನಿಧಿಯನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. 2018ರಲ್ಲಿ ಸಿಬಿಐ ಸಲ್ಲಿಸಿದ ಚಾರ್ಜ್​ಶೀಟ್​ ಆಧರಿಸಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts