More

    ಬಹುಕೋಟಿ ಹಣ ಅಕ್ರಮ ವರ್ಗಾವಣೆ; ಪ್ರತಿಷ್ಠಿತ ಶಿಪ್​ಯಾರ್ಡ್​ ಕಂಪನಿ ಮೇಲೆ ED ದಾಳಿ

    ಮುಂಬೈ: ಎಬಿಜಿ ಶಿಪ್‌ಯಾರ್ಡ್ ಲಿಮಿಟೆಡ್ ಮತ್ತು ಅದರ ಅಂಗಸಂಸ್ಥೆಗಳಿಗೆ ಸಂಬಂಧಿಸಿದ ಕಂಪನಿಗಳಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ED) ಮುಂಬೈ, ದೆಹಲಿ ಮತ್ತು ಪುಣೆ ಸೇರಿದಂತೆ ಏಳು ಕಡೆ ದಾಳಿ ನಡೆಸಿದೆ.

    ಸುಮಾರು 22,842 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎನ್ನಲಾಗಿದ್ದು, ಸಿಬಿಐ ದಾಖಲಿಸಿರುವ FIR ಆಧರಿಸಿ ಜಾರಿ ನಿರ್ದೇಶನಾಲಯ PMLA ಕಾಯ್ದೆ ಅಡಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ.

    ಇದನ್ನೂ ಓದಿ: VIDEO| ಪ್ರಿಯಕರನಿಗಾಗಿ ಪಾಕ್​ಗೆ ತೆರಳಿದ ಅಂಜು ಭಾರತಕ್ಕೆ ವಾಪಸ್!

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಎಬಿಜಿ ಶಿಪ್‌ಯಾರ್ಡ್ ಮತ್ತು ಅದರ ಸಂಬಂಧಿತ ಕಂಪನಿಗಳಿಗೆ ಸಂಬಂಧಿಸಿದ ವ್ಯಕ್ತಿಗಳು ಮತ್ತು ಕುಟುಂಬದ ಸದಸ್ಯರ ನಿವಾಸಗಳಲ್ಲಿ ನಡೆಸಿದ ಶೋಧನೆಯಲ್ಲಿ ಲೆಕ್ಕಕ್ಕೆ ಸಿಗದ ಭಾರತೀಯ ಮತ್ತು ವಿದೇಶಿ ಕರೆನ್ಸಿ, ಚಿನ್ನಾಭರಣ ಮತ್ತು ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

    ದಾಳಿ ವೇಳೆ ಸುಮಾರು 5 ಕೋಟಿ ಹಣ, 46.85 ಲಕ್ಷ ರೂಪಾಯಿ ವಿದೇಶಿ ಹಣ, 86.52 ಲಕ್ಷ ರೂಪಾಯಿ ಮೌಲ್ಯದ ಆಭರಣಗಳ ಜತೆಗೆ ಕೆಲವು ದಾಖಲೆಗಳು ಹಾಗೂ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಐಸಿಐಸಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟಕ್ಕೆ 22,842 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಸಿಬಿಐ ದಾಖಲಿಸಿದ FIR ಆಧರಿಸಿ ಈ ದಾಳಿ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts