

ED: ವಾಲ್ಮೀಕಿ ನಿಗಮ ಹಗರಣದ ಪ್ರಕರಣ ಹಿನ್ನೆಲೆಯಲ್ಲಿ ಬಳ್ಳಾರಿ ಸಂಸದ ಈ.ತುಕಾರಾಂ ಮನೆ ಮೇಲೆ ಬುಧವಾರ ಬೆಳ್ಳಂ ಬೆಳಗ್ಗೆ ಇಡಿ ದಾಳಿ ನಡೆಸಿದೆ.
ಜಿಲ್ಲೆಯ ಸಂಡೂರಲ್ಲಿರುವ ತುಕಾರಾಂ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಅಗತ್ಯ ದಾಖಲೆಗಳು ವಶಪಡಿಸಿಕೊಳ್ಳಲಾಗಿದೆ. ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್, ಮಾಜಿ ಸಚಿವ ಬಿ.ನಾಗೇಂದ್ರ, ಬಳ್ಳಾರಿ ನಗರ ನಾರಾಭರತ ರೆಡ್ಡಿ ಮನೆಗಳ ಮೇಲೆ ಕೂಡ ಇಡಿ ಶೋಧಕಾರ್ಯ ಮಾಡುತ್ತಿದೆ.
ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೆ, ಕೂಡ್ಲಿಗಿ ಶಾಸಕ ಡಾ.ಎನ್.ಟಿ ಶ್ರೀನಿವಾಸ್ ಮನೆಯಲ್ಲೂ ED ಶೋಧ ನಡೆದಿದೆ.