ಕಲ್ಕತ್ತಾ: ಆರ್.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದ್ದ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಶದಲ್ಲಿರುವ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಂದೀಪ್ ಘೋಷ್ ಅವರ ನಿವಾಸ ಹಾಗೂ ಅವರಿಗೆ ಸೇರಿದ್ದು ಎನ್ನಲಾದ ಎರಡು ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ಬೆಲ್ಘಟ್, ಹೌರಾ ಹಾಗೂ ಸುಭಾಶ್‌ಗ್ರಾಂ ಪಟ್ಟಣಗಳಲ್ಲಿ ಇ.ಡಿ. ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಏಕ ಕಾಲಕ್ಕೆ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಹಲವು ದಾಖಲೆ ಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರ್.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ಮಾಡಲಾಗಿದೆ.
ಇದನ್ನೂ ಓದಿ: ಜಾತ್ರೆ ವೇಳೆ ವ್ಹೀಲಿಂಗ್ ಪುಂಡರ ಹಾವಳಿ; ನಾಲ್ವರು ಬಲಿ, ಇಬ್ಬರು ಚಿಂತಾಜನಕ
ಆರ್.ಜಿ. ಕರ್ ಕಾಲೇಜಿನ ಸಭಾಂಗಣದಲ್ಲಿ ಆ.9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆಕೆಯ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಅವ್ಯವಹಾರ ನಡೆದಿರುವ ಆರೋಪವು ಕೇಳಿ ಬಂದಿತ್ತು.
ಸಂದೀಪ್ ಘೋಷ್ ಅವಧಿಯಲ್ಲಿ ಆರ್.ಜಿ. ಕರ್ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಅವ್ಯವಹಾರ ನಡೆದಿದೆ ಎಂದು ಅಲ್ಲಿನ ಮಾಜಿ ಅಧಿಕಾರಿಯೊಬ್ಬರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.