

ನವದೆಹಲಿ: ಚುನಾವಣೆಗೆ ಎಲ್ಲೆಲ್ಲಿಂದ ಹಣ ಪೂರೈಕೆ ಆಗುತ್ತದೆ ಎನ್ನುವುದೇ ಒಂದು ಅಚ್ಚರಿಯ ಸಂಗತಿ. ಅದರಲ್ಲೂ ಈಗ ಬೆಟ್ಟಿಂಗ್ ಆ್ಯಪ್ನವರ ಕಡೆಯಿಂದಲೂ ಚುನಾವಣೆಗೆ ಹಣ ಪೂರೈಕೆ ಆಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಸುದ್ದಿಯಲ್ಲಿರುವ ಮಹದೇವ ಬೆಟ್ಟಿಂಗ್ ಆ್ಯಪ್ ಚುನಾವಣೆಗೆ ಭಾರಿ ಹಣ ಒದಗಿಸಲು ಹೋಗಿ ಸಿಕ್ಕಿಬಿದ್ದಿರುವ ಪ್ರಕರಣ ನಡೆದಿದೆ. ಜಾರಿ ನಿರ್ದೇಶನಾಲಯವು ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ದೊಡ್ಡ ಮೊತ್ತದ ಹಣವನ್ನು ವಶಕ್ಕೆ ಪಡೆದುಕೊಂಡಿದೆ.
ಛತ್ತೀಸ್ಗಢ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹದೇವ ಆ್ಯಪ್ನ ಪ್ರಮೋಟರ್ಸ್ ಹಣ ಸರಬರಾಜು ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಇಡಿ ಕಾರ್ಯಾಚರಣೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಯುಎಇನಿಂದ ಬಂದ ಕೊರಿಯರ್ನಲ್ಲಿ ಭಾರಿ ಮೊತ್ತದ ಹಣ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.