More

    ಅಬಕಾರಿ ನೀತಿ ಹಗರಣ; ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ED ಸಮನ್ಸ್​

    ನವದೆಹಲಿ: ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಜಾರಿ ನಿರ್ದೇಶನಾಲಯ (ED) ನೋಟಿಸ್ ಜಾರಿ ಮಾಡಿದೆ

    ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಬಹುಕೋಟಿ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಏಪ್ರಿಲ್ ತಿಂಗಳಲ್ಲಿ ಅರವಿಂದ್​ ಕೇಜ್ರಿವಾಲ್​ರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. 9.5 ಘಂಟೆಗಳ ಕಾಲ ವಿಚಾರಣೆ ಎದುರಿಸಿದ್ದ ಕೇಜ್ರಿವಾಲ್​ 56 ಪ್ರಶ್ನೆಗಳಿಗೆ ಉತ್ತರಿಸಿದ್ದಾಗಿ ತಿಳಿಸಿದ್ದರು.

    ನವೆಂಬರ್​ 02ರಂದು ವಿಚಾರಣೆಗೆ ಹಾಜರಾಗುವಂತೆ ED ನೋಟಿಸ್​ ಜಾರಿ ಮಾಡಿತ್ತು. ಆದರೆ, ಇದು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಅರವಿಂದ್​ ಕೇಜ್ರಿವಾಲ್​ ವಿಚಾರಣೆಗೆ ಹಾಜರಾಗಿರಲಿಲ್ಲ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಕೇಜ್ರಿವಾಲ್​ಗೆ ಸಮನ್ಸ್​ ನೀಡಲಾಗಿದೆ. ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ನೋಟಿಸ್​ ಜಾರಿ ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts