More

    ಉದ್ಯೋಗಕ್ಕಾಗಿ ಭೂಮಿ ಹಗರಣ; ಲಾಲು-ತೇಜಸ್ವಿಗೆ ED ಸಮನ್ಸ್​

    ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಯೋಜನೆ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಜೆಡಿ ವರಿಷ್ಠ ಲಾಲು ಪ್ರಸಾದ್​ ಯಾದವ್, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್​ಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್​ ಜಾರಿ ಮಾಡಿದೆ.

    ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತನಿಖಾಧಿಕಾರಿಗಳ ಮುಂದೆ ತಮ್ಮ ಹೇಳಿಕೆ ದಾಖಲಿಸಲು ಡಿಸೆಂಬರ್​ 22ರಂದು ತೇಜಸ್ವಿ ಯಾದವ್ ಹಾಗೂ ಡಿಸೆಂಬರ್​ 27ರಂದು ಲಾಲು ಪ್ರಸಾದ್​ ಯಾದವ್ ವಿಚಾರಣೆಗೆ ಹಾಜರಾಗುವಂತೆ​ ನೀಡಲಾಗಿರುವ ಸಮನ್ಸ್​ನಲ್ಲಿ ಸೂಚಿಸಲಾಗಿದೆ.

    ಲಾಲು ಪ್ರಸಾದ್​ ಯಾದವ್​ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದ ವೇಳೆ ಹಗರಣ ನಡೆದಿದ್ದು, 2004 ರಿಂದ 2009ರ ಅವಧಿಯಲ್ಲಿ ರೈಲ್ವೆ ಇಲಾಖೆಯ ಡಿ ಗ್ರೂಪ್​ ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತು. ನೇಮಕಗೊಂಡವರು ಬದಲಿಯಾಗಿ ತಮ್ಮ ಜಮೀನನ್ನು ಆಗಿನ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್​ ಯಾದವ್​ ಅವರಿಗೆ ಸಂಬಂಧಿಸಿದ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್​ಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts