20.4 C
Bengaluru
Monday, January 20, 2020

ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಇಡಿ ಸಮನ್ಸ್

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ನವದೆಹಲಿ: ಭೂ ಅಕ್ರಮಕ್ಕೆ ಸಂಬಂಧಿಸಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

ರಾಜಸ್ಥಾನದ ಬಿಕಾನೇರ್ ನಗರದ ಕೊಲಾಯತ್ ಪ್ರದೇಶದಲ್ಲಿ ಅಕ್ರಮವಾಗಿ ಭೂ ಪರಭಾರೆ ಮಾಡಿರುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು 2015ರಲ್ಲಿ ಕ್ರಿಮಿನಲ್ ದೂರು ದಾಖಲಿಸಿಕೊಂಡಿದೆ. ನವೆಂಬರ್​ ಮೊದಲ ವಾರದಲ್ಲಿ ಮೊದಲ ಸಮನ್ಸ್​ ನೀಡಲಾಗಿತ್ತು. ಆದರೆ ವಾದ್ರಾ ವಿಚಾರಣೆಗೆ ಹಾಜರಾಗಿರಲಿಲ್ಲ. ಹಾಗಾಗಿ ಈಗ ಎರಡನೇ ಬಾರಿಗೆ ವಾದ್ರಾಗೆ ಸಮನ್ಸ್ ನೀಡಲಾಗಿದ್ದು, ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ರಾಬರ್ಟ್ ವಾದ್ರಾಗೆ ಸೇರಿದೆ ಎನ್ನಲಾದ ಸ್ಕೈಲೈಟ್​ ಹಾಸ್ಪಿಟಾಲಿಟಿ ಕಂಪನಿಗೆ ಅಕ್ರಮವಾಗಿ 374.44 ಹೆಕ್ಟೇರ್ ಭೂಮಿಯನ್ನು ಪರಭಾರೆ ಮಾಡಲಾಗಿದೆ. ಇದಕ್ಕೂ ಮುಂಚೆ ಈ ಭೂಮಿಯು ಸೇನೆಗಾಗಿ ಮೀಸಲಿಡಲಾಗಿತ್ತು. ಈ ಅಧಿಸೂಚನೆ ರದ್ದುಪಡಿಸಿ ಖಾಸಗಿ ವ್ಯಕ್ತಿಗಳಿಗೆ ಭೂಮಿ ಹಸ್ತಾಂತರಿಸಲಾಗಿತ್ತು. ಈ ಖಾಸಗಿ ವ್ಯಕ್ತಿಗಳು ವಾದ್ರಾ ಜತೆಗೆ ಸಂಬಂಧ ಹೊಂದಿದವರಾಗಿದ್ದಾರೆ. ಈ ವ್ಯವಹಾರದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎನ್ನುವುದು ಜಾರಿ ನಿರ್ದೇಶನಾಲಯದ ಆರೋಪವಾಗಿದೆ.

ವಾದ್ರಾ ವಿರುದ್ಧ ಷಾ ವಾಗ್ದಾಳಿ

ರಾಬರ್ಟ್​ ವಾದ್ರಾ ಹೆಸರಾಂತ ಕಂಪನಿಯೊಂದಕ್ಕೆ ಬ್ಯಾಂಕ್​ನಲ್ಲಿ ಸಾವಿರಾರು ಕೋಟಿ ರೂ. ಸಾಲ ಕೊಡಿಸಿದ್ದು, ಇದಕ್ಕಾಗಿ ಕಂಪನಿಯಿಂದ ಕಮಿಷನ್​ ಪಡೆದಿದ್ದಾರೆ. ಇದೇ ಹಣದಿಂದ ವಾದ್ರಾ ಕಡಿಮೆ ಬೆಲೆಯಲ್ಲಿ 150 ಹೆಕ್ಟೇರ್​ ಭೂಮಿ ಖರೀದಿಸಿ ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದಾರೆ. ಇದಕ್ಕೆ ರಾಹುಲ್​ ಗಾಂಧಿ ಏನು ಉತ್ತರ ನೀಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ರಾಜಸ್ಥಾನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. (ಏಜೆನ್ಸೀಸ್​)

 

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...