20.8 C
Bangalore
Sunday, December 8, 2019

ಕೃಷ್ಣಮಠದಲ್ಲಿ ನಡೆಯದ ಎಡೆಸ್ನಾನ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಷಷ್ಠಿ ಉತ್ಸವ ಅಂಗವಾಗಿ ಸೋದೆ ವಾದಿರಾಜರಿಂದ ಪ್ರತಿಷ್ಠಿತ ಸುಬ್ರಹ್ಮಣ್ಯ ದೇವರಿಗೆ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ವಿಶೇಷ ಪೂಜೆ ನೆರವೇರಿಸಿದರು. ಪರ್ಯಾಯ ಶ್ರೀಗಳು ಮತ್ತು ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರ ಉಪಸ್ಥಿತಿಯಲ್ಲಿ ರಥಬೀದಿಯಲ್ಲಿ ಸುಬ್ರಹ್ಮಣ್ಯ ದೇವರ ರಥೋತ್ಸವ ನಡೆಯಿತು.

ಶ್ರೀಕೃಷ್ಣಮಠದಲ್ಲಿ ಎಡೆಸ್ನಾನ, ಮಡೆಸ್ನಾನ ಎರಡಕ್ಕೂ ಈ ಬಾರಿ ವಿದಾಯ ಹೇಳಲಾಯಿತು. ಅನಗತ್ಯ ವಿವಾದ ಬೇಡವೆಂದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಮಹತ್ವದ ನಿರ್ಧಾರ ಕೈಗೊಂಡರು. ಶ್ರೀಕೃಷ್ಣಮಠದ ಸುಬ್ರಹ್ಮಣ್ಯ ಗುಡಿಯ ಆವರಣದಲ್ಲಿ ಹಿಂದೆ ನಡೆಯುತ್ತಿದ್ದ ಮಡೆಸ್ನಾನ ವಿವಾದದ ಬಳಿಕ ನಿಲ್ಲಿಸಲಾಗಿತ್ತು. ಪೇಜಾವರ ಶ್ರೀಗಳ ಸಲಹೆಯಂತೆ ಬಳಿಕ ಎಡೆಸ್ನಾನ ನಡೆಯುತ್ತಿತ್ತು. ಈ ಬಾರಿ ಆಸಕ್ತ ಭಕ್ತರಿಂದ ಉರುಳು ಸೇವೆ ಮಾತ್ರ ನಡೆದಿದೆ.
‘ತಿನ್ನುವ ಅನ್ನದ ಮೇಲೆ ಉರುಳು ಸೇವೆ ಕೆಲವರಿಗೆ ಇಷ್ಟವಿಲ್ಲ, ಎಡೆಸ್ನಾನದಿಂದ ಕೆಲವರಿಗೆ ಬೇಸರವಾಗಿದೆ. ಅನಗತ್ಯ ವಿವಾದ ಬೇಡವೆಂದು ಈ ನಿರ್ಧಾರಕ್ಕೆ ಬಂದಿದ್ದೇವೆ’ ಎಂದು ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಎಡೆಸ್ನಾನ ಹರಕೆ: ಮುಚ್ಲಕೋಡು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪೇಜಾವರ ಶ್ರೀ ವಿಶ್ವೇಶತೀರ್ಥ, ಕಿರಿಯ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತಾಂಗೋಡು ಸುಬ್ರಹ್ಮಣ್ಯ ದೇವಳಕ್ಕೆ ಪೇಜಾವರ ಕಿರಿಯ ಶ್ರೀ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮುಚ್ಲಕೋಡು ಸುಬ್ರಹ್ಮಣ್ಯ ದೇವಳ, ಸಗ್ರಿ ವಾಸುಕಿ ಸುಬ್ರಹ್ಮಣ್ಯ ದೇವಳ, ಅರಿತೋಡು ದೇವಸ್ಥಾನಗಳಲ್ಲಿ ಭಕ್ತರು ಎಡೆಸ್ನಾನ ಹರಕೆ ತೀರಿಸಿದರು.

ಜಾತಿ ಬಂದಾಗ ಸಂಘರ್ಷ ಎಡೆಸ್ನಾನ ಸ್ಥಗಿತಕ್ಕೆ ಸ್ವಾಗತ: ಘರ್ಷಣೆ, ವಿವಾದಕ್ಕೆಡೆ ಮಾಡುವ ಆಚರಣೆಗಳು ನಮಗೆ ಬೇಡ, ಪಲಿಮಾರು ಶ್ರೀಗಳ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಜಾತಿ ಹೆಸರಲ್ಲಿ ವಿರೋಧ ಬಂದರೆ ಸಂಘರ್ಷವಾಗುತ್ತದೆ. ದೇವಸ್ಥಾನದಲ್ಲಿ ಮಡೆಸ್ನಾನ, ಎಡೆಸ್ನಾನ ಅನಿವಾರ್ಯವಿಲ್ಲ. ಹಿಂದು ಧರ್ಮಕ್ಕೆ ಇದರಿಂದ ಯಾವುದೇ ಹಾನಿಯೂ ಇಲ್ಲ. ದೇವಸ್ಥಾನ ಉತ್ಸವ, ಪೂಜೆ ಶಾಸ್ತ್ರಬದ್ಧವಾಗಿ ನಡೆದರೆ ಸಾಕು, ವಿವಾದ ಭಿನ್ನಾಭಿಪ್ರಾಯದ ಆಚರಣೆಗಳು ನಿಂತರೆ ಹಿಂದು ಧರ್ಮಕ್ಕೆ ನಷ್ಟವಿಲ್ಲ ಎಂದರು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...