ವಿನೂತನ ಪ್ರಯೋಗ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಸಾಮಾನ್ಯವಾಗಿ ಸರ್ಕಾರಿ ಆಡಳಿತಯಂತ್ರ ಎಂದರೆ ಜಡ್ಡುಗಟ್ಟಿದ ವ್ಯವಸ್ಥೆ ಎಂಬ ಗ್ರಹಿಕೆ ಬೇರೂರಿದೆ. ಇದು ವಾಸ್ತವಕ್ಕೆ ಹತ್ತಿರವೂ ಹೌದು. ಬಹುತೇಕ ಸರ್ಕಾರಿ ಕಚೇರಿ ಅಥವಾ ಸಚಿವಾಲಯಗಳಲ್ಲಿ ಕಡತಗಳು ಒಂದು ಮೇಜಿನಿಂದ ಮತ್ತೊಂದು ಮೇಜಿಗೆ, ಅಲ್ಲಿಂದ ಮೇಲಧಿಕಾರಿಗೆ ವರ್ಗವಾಗುತ್ತ ಹೋಗುವಷ್ಟರಲ್ಲಿ ಬಹುಮೂಲ್ಯ ಸಮಯ ಸವೆದಿರುತ್ತದೆ. ಇನ್ನು, ಯಾವುದಾದರೂ ಕೆಲಸಕ್ಕೆ ಜನಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಹೋದರೆ ‘ನಾಳೆ ಬಾ’ ಎಂಬ ಸಿದ್ಧ ಉತ್ತರ. ಸಚಿವಾಲಯಗಳಲ್ಲಿಯೂ ಈ ಬಗೆಯ ವಿಳಂಬ, ಜಡತ್ವ ಹೊಸದೇನಲ್ಲ. ಆದ್ದರಿಂದ ಸರ್ಕಾರಿ ಯೋಜನೆಗಳ ಅನುಷ್ಠಾನ ಆಮೆಗತಿಯಲ್ಲಿ ನಡೆಯುವುದು ಗೊತ್ತಿರುವಂಥದ್ದೇ. ಈ ಇಡೀ ಜಾಡ್ಯವನ್ನು ತೊಲಗಿಸುವ ಪ್ರಯತ್ನ 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಆರಂಭವಾಯಿತು ಎನ್ನಬಹುದು. ಪ್ರಧಾನಿ ಕಾರ್ಯಾಲಯದಿಂದಲೇ (ಪಿಎಂಒ) ಈ ‘ಚುರುಕು ಕಾರ್ಯಾಚರಣೆ’ ಆರಂಭವಾಗಿ, ಗಮನ ಸೆಳೆಯಿತು.

ಪ್ರಸಕ್ತ, ಆಡಳಿತಕ್ಕೆ ಖಾಸಗಿ ಸ್ಪರ್ಶ ನೀಡುವ ವಿನೂತನ ಪ್ರಯೋಗಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಅಂದರೆ, ಕೇಂದ್ರ ಸರ್ಕಾರಿ ಸೇವೆಗೆ ಇದೇ ಮೊದಲ ಬಾರಿಗೆ ಪರ್ಯಾಯ ನೇಮಕಾತಿ ಮೂಲಕ ಒಂಬತ್ತು ಜಂಟಿ ಕಾರ್ಯದರ್ಶಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿದೆ. ಈವರೆಗೆ ಕೇಂದ್ರೀಯ ಲೋಕಸೇವಾ ಆಯೋಗದ (ಯುಪಿಎಸ್​ಸಿ) ಪರೀಕ್ಷೆಯಲ್ಲಿ ತೇರ್ಗಡೆಯಾಗಿ, ತರಬೇತಿ ಬಳಿಕ ವಿವಿಧ ಇಲಾಖೆಗಳಿಗೆ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿತ್ತು. ಕೆಲಸದ ಅನುಭವ ಆಧರಿಸಿ ವಿವಿಧ ಸಚಿವಾಲಯಗಳ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಲಾಗುತ್ತಿತ್ತು. ಆದರೆ, ಇದೇ ಮೊದಲ ಬಾರಿಗೆ ಖಾಸಗಿ ಕ್ಷೇತ್ರದ ವೃತ್ತಿಪರರನ್ನು ನೇರ ನೇಮಕಾತಿ ಮಾಡಲಾಗಿದೆ ಎಂಬುದು ವಿಶೇಷ. ಈ ನೇಮಕಾತಿ ಯುಪಿಎಸ್​ಸಿ ನಿಗಾದಲ್ಲೇ ನಡೆದಿದ್ದು, ಗುಣಮಟ್ಟಕ್ಕೆ ರಾಜಿ ಮಾಡಿಕೊಳ್ಳದ ಹಾಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ.

ಪ್ರಧಾನಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಶೈಲಿಯಲ್ಲಿ ಮತ್ತು ಉಳಿದ ಅಧಿಕಾರಶಾಹಿ ಕೂಡ ಪರಿಣಾಮಕಾರಿ ವಿಧಾನದಲ್ಲಿ ಕಾರ್ಯನಿರ್ವಹಿಸುವಂತಾಗಬೇಕು ಎಂಬ ಆಶಯ ಈ ಹಿಂದೆಯೇ ವ್ಯಕ್ತವಾಗಿತ್ತು. ಅದಕ್ಕೆ ಪೂರಕವಾಗಿ ಆಡಳಿತವ್ಯವಸ್ಥೆಗೆ ಬಲ ತುಂಬಲು ಈ ಹೆಜ್ಜೆ ಇರಿಸಲಾಗಿದೆ. ಖಾಸಗಿ ವಲಯದಲ್ಲಿನ ವೃತ್ತಿಪರತೆ, ಕಾಲಮಿತಿಯಲ್ಲಿ ಕೆಲಸಕಾರ್ಯಗಳು ಪೂರ್ಣಗೊಳ್ಳುವುದು, ಪಾರದರ್ಶಕ ವ್ಯವಹಾರ, ಸಂಬಂಧಿತರ ಉತ್ತರದಾಯಿತ್ವದ ಅಂಶಗಳು ಸರ್ಕಾರಿ ವಲಯದಲ್ಲಿ ಸೇರಿಕೊಂಡರೆ ಸುಧಾರಣೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೇ ಸರಿ.

ಲ್ಯಾಟರಲ್ ಎಂಟ್ರಿ (ಪಾರ್ಶ್ವ ಪ್ರವೇಶ) ಪ್ರಯೋಗದ ಮೂಲಕ ನಾಗರಿಕ ವಿಮಾನಯಾನ, ಪರಿಸರ, ನವೀಕರಿಸಬಹುದಾದ ಇಂಧನ, ಕೃಷಿ ಸಹಕಾರ, ಕೃಷಿಕರ ಕಲ್ಯಾಣ, ಹಣಕಾಸು ಸೇವೆ, ಹಣಕಾಸು ವ್ಯವಹಾರ, ವಾಣಿಜ್ಯ, ರಸ್ತೆ ಸಾರಿಗೆ ಮತ್ತು ಹೆದ್ದಾರಿ, ಬಂದರು ಸಚಿವಾಲಯಗಳಿಗೆ ಜಂಟಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದ್ದು, ಈ ಮೂಲಕ ಸಂಬಂಧಪಟ್ಟ ಸಚಿವಾಲಯಗಳಿಗೆ ಬದಲಾವಣೆಯ ಹೊಸಸ್ಪರ್ಶ ಸಿಗಲಿದೆ ಎಂದು ಆಶಿಸಬಹುದು. ವಿಳಂಬನೀತಿ ಕೊನೆಗೊಳಿಸಿ ಆಡಳಿತವೈಖರಿ ಚುರುಕುಗೊಳಿಸಲು ಇಂಥ ಪ್ರಯೋಗಗಳು ಪೂರಕವಾಗಿ ಪರಿಣಮಿಸಲಿ. ಅದೇನಿದ್ದರೂ, ಇದರ ಯಶಸ್ಸು-ಕೊರತೆಗಳನ್ನು ಅರಿಯಲು ಒಂದಿಷ್ಟು ಸಮಯ ಕಾಯುವುದು ಸೂಕ್ತ.

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....