24.9 C
Bangalore
Wednesday, December 11, 2019

ಭರವಸೆ ನೀಡುವುದಲ್ಲ ಯೋಜನೆಗಳ ಅನುಷ್ಠಾನ ಮುಖ್ಯ

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಎಲ್ಲ ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳು ಚುನಾವಣೆ ವೇಳೆ ದೊಡ್ಡ ದನಿಯಲ್ಲಿ ನೀಡುವ ಹಲವು ಭರವಸೆಗಳ ಪೈಕಿ ಗೃಹನಿರ್ವಣದ್ದೂ ಒಂದು. ‘ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಇಷ್ಟು ಲಕ್ಷ ಮನೆಗಳನ್ನು ಕಟ್ಟುತ್ತೇವೆ’ ಎಂದೆಲ್ಲ ಅಬ್ಬರಿಸಲಾಗುತ್ತದೆ. ಆದರೆ, ವಸತಿ ಸಂಬಂಧಿತ ಯೋಜನೆಗಳನ್ನು ವೇಗದಲ್ಲಿ ಮುನ್ನಡೆಸುವ, ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುವ ಇಚ್ಛಾಶಕ್ತಿ ಯಾರಿಂದಲೂ ಪ್ರದರ್ಶಿತವಾಗುತ್ತಿಲ್ಲ ಎಂಬುದು ಕಹಿವಾಸ್ತವ.

ಪರಿಣಾಮ, ಬಡವರು, ಕೆಳಮಧ್ಯಮವರ್ಗದವರ ಸೂರಿನ ಕನಸು ಕನಸಾಗಿಯೇ ಉಳಿಯುತ್ತಿದೆ. ಕೇಂದ್ರ ಸರ್ಕಾರ ಕೂಡ 2022ರೊಳಗೆ ಎಲ್ಲರಿಗೂ ಸೂರು ಒದಗಿಸುವ ಗುರಿ ಹಾಕಿಕೊಂಡಿದೆ. ರಾಜ್ಯ ಮತ್ತು ಕೇಂದ್ರದ ಸಹಭಾಗಿತ್ವದಲ್ಲಿ ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದ್ದೇ ಆದಲ್ಲಿ ಕ್ರಾಂತಿಕಾರಿ ಎನಿಸುವಂಥ ಬದಲಾವಣೆ ತರಬಹುದು. ಆದರೆ, ಇಂಥ ಇಚ್ಛಾಶಕ್ತಿಯನ್ನು ಪ್ರದರ್ಶಿಸುವವರು ಯಾರು? ಘೋಷಣೆಗಳನ್ನು ಹೊರಡಿಸುವಾಗಿನ ಅದಮ್ಯ ಉತ್ಸಾಹ ಅನುಷ್ಠಾನ ಹಂತದಲ್ಲಿ ಕಂಡುಬರುವುದಿಲ್ಲ.

ಅನುದಾನದ ಕೊರತೆ ಅಥವಾ ಸರಿಯಾದ ಸಮಯಕ್ಕೆ ಬಿಡುಗಡೆಯಾಗದ ಅನುದಾನ, ಜಮೀನು ಸಿಗದಿರುವುದು ಅಲ್ಲದೆ ಯಾವುದೋ ತಾಂತ್ರಿಕ ಕಾರಣಗಳನ್ನು ಅಧಿಕಾರಿವರ್ಗ ಹುಡುಕಿಕೊಂಡು ಕಾಮಗಾರಿ ಅರ್ಧಕ್ಕೇ ನಿಲ್ಲಿಸಿಬಿಡುತ್ತದೆ. ಪ್ರಸಕ್ತ, ಕರ್ನಾಟಕದ ಸ್ಥಿತಿಯೂ ಹೀಗೆ ಆಗಿದೆ. ಮನೆಗಳ ನಿರ್ಮಾಣ ಕಾಮಗಾರಿಯೇ ಸ್ಥಗಿತಗೊಂಡಿರುವುದು ‘ವಿಜಯವಾಣಿ’ ನಡೆಸಿದ ಅವಲೋಕನದಲ್ಲಿ ಸ್ಪಷ್ಟವಾಗಿದೆ. ಬಸವ ವಸತಿ ಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ, ದೇವರಾಜ ಅರಸು ವಸತಿ ಯೋಜನೆ, ಇಂದಿರಾ ಗ್ರಾಮೀಣ ವಸತಿ ಯೋಜನೆ ಸೇರಿ ವಿವಿಧ ಯೋಜನೆಗಳಡಿ ರಾಜ್ಯದಲ್ಲಿ 2016ರಿಂದ 2019ರವರೆಗೆ 21,69,179 ಮನೆ ನಿರ್ವಿುಸಲು ಸರ್ಕಾರ ಮುಂದಾಗಿತ್ತು.

ಆದರೆ, ಸಮಯಕ್ಕೆ ಸರಿಯಾಗಿ ಅನುದಾನ ಬಿಡುಗಡೆ ಆಗದ ಪರಿಣಾಮ 5,78,936 ಮನೆಗಳು ಇನ್ನೂ ನಿರ್ಮಾಣ ಹಂತದಲ್ಲೇ ಇವೆ. ಅಷ್ಟೇ ಅಲ್ಲ, 60,726 ಮನೆ ನಿರ್ಮಾಣ ಕಾಮಗಾರಿಯೇ ಆರಂಭಗೊಂಡಿಲ್ಲ ಮತ್ತು 4,12,962 ಮನೆಗಳ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ. ಕಳೆದ ಐದು ವರ್ಷಗಳಿಂದ ಇದೇ ಸ್ಥಿತಿ ಇದ್ದು, ಯೋಜನೆಯ ಫಲಾನುಭವಿಗಳು ಯಾರ ಬಳಿಗೆ ನ್ಯಾಯ ಕೇಳಬೇಕು ಎಂದು ತಿಳಿಯದೆ ಚಿಂತಾಕ್ರಾಂತರಾಗಿದ್ದಾರೆ.

ಅಡಿಪಾಯ ಹಾಕಿದ ಬಳಿಕ 90 ದಿನಗಳ ಒಳಗೆ ಮನೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳದಿದ್ದರೆ, ಅಂತಹ ಮನೆಗೆ ಹಣ ಮಂಜೂರಾಗುವುದಿಲ್ಲ ಎಂಬ ನಿಯಮವಿದೆ. ಉತ್ತರ ಕರ್ನಾಟಕದಲ್ಲಿ ಇತ್ತೀಚೆಗೆ ಸಂಭವಿಸಿದ ಭಾರಿ ಪ್ರವಾಹದಿಂದ ಅಲ್ಲಿನ ಜನ ಅಪಾರ ಹಾನಿ ಅನುಭವಿಸಿದ್ದಾರೆ. ಇಂಥ ಹೊತ್ತಲ್ಲಿ ಮಾನವೀಯತೆ ಆಧಾರದ ಮೇಲೆ ತಾತ್ಕಾಲಿಕವಾಗಿಯಾದರೂ, ನಿಯಮಗಳನ್ನು ಸಡಿಲಿಸಬೇಕು.

ಈ ನಿಟ್ಟಿನಲ್ಲಿ ತೊಡಕುಗಳನ್ನು ನಿವಾರಿಸಿಕೊಂಡು ಫಲಾನುಭವಿಗಳಿಗೆ ಅನಾನಕೂಲವಾಗದಂತೆ ಯೋಜನೆಗಳನ್ನು ಮುಂದುವರಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು. ಆಗ ಮಾತ್ರ, ಇಂಥ ಯೋಜನೆಗಳ ಆಶಯ ಮತ್ತು ಸೂರಿನ ಕನಸು ನನಸಾಗಲು ಸಾಧ್ಯ.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...