21 C
Bengaluru
Wednesday, January 22, 2020

ದೇಶದಲ್ಲಿ ಸರಕು ಸೇವಾ ತೆರಿಗೆಯ ಜಿಜ್ಞಾಸೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ನಮ್ಮ ದೇಶದಲ್ಲಿ ಹಿಂದೆ ಹಲವು ಬಗೆಯ ನೇರ ಮತ್ತು ಪರೋಕ್ಷೆ ತೆರಿಗೆಗಳಿದ್ದವು. ಇವು ಎಷ್ಟು ಸಂಕೀರ್ಣವಾಗಿದ್ದವೆಂದರೆ, ತೆರಿಗೆ ತಜ್ಞರಿಗೆ ಮಾತ್ರ ಸರಿಯಾಗಿ ಅರ್ಥವಾಗುತ್ತಿತ್ತು. ಈ ಎಲ್ಲ ಗೊಂದಲಗಳಿಗೆ ತೆರೆಯೆಳೆದು, ಸರ್ಕಾರಗಳಿಗೂ ಹೆಚ್ಚಿನ ಆದಾಯ ಬರಬೇಕೆಂಬ ಉದ್ದೇಶದಿಂದ ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಜಾರಿಗೆ ತರಲಾಯಿತು.

‘ಒಂದು ದೇಶ ಒಂದು ತೆರಿಗೆ’ ಎಂದೇ ಇದನ್ನು ಬಿಂಬಿಸಲಾಯಿತು. ಆದರೆ ಜಿಎಸ್​ಟಿ ವ್ಯವಸ್ಥೆಯಲ್ಲಿಯೂ ಹಲವು ಕುಂದುಕೊರತೆಗಳು ಕಾಣಿಸಿಕೊಂಡಿವೆ ಮತ್ತು ಸರ್ಕಾರ ನಿರೀಕ್ಷಿಸಿದಷ್ಟು ಆದಾಯ ಸಂಗ್ರಹವಾಗುತ್ತಿಲ್ಲ. ಹೀಗಾಗಿ ಈಗ ಮತ್ತೆ ಕೆಲ ವಸ್ತುಗಳನ್ನು ಜಿಎಸ್​ಟಿ ವ್ಯಾಪ್ತಿಗೆ ತರಲು ಮತ್ತು ಸ್ಲಾಬ್​ಗಳಲ್ಲಿ ಬದಲಾವಣೆ ಮಾಡಲು ಸರ್ಕಾರ ಆಲೋಚಿಸಿದೆ.

ಜಿಎಸ್​ಟಿ ಮಂಡಳಿ ಸಭೆ ಇದೇ 18ರಂದು ನಡೆಯಲಿದ್ದು, ಅಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಆಗಬೇಕಿದೆ. ಶೇ.5 ಸ್ಲಾಬ್​ನಲ್ಲಿರುವ ಸಿರಿಧಾನ್ಯಗಳು, ಹಿಟ್ಟು, ಪನ್ನೀರ್, ಎಕಾನಮಿ ದರ್ಜೆ ವಿಮಾನ ಪ್ರಯಾಣ, ತಾಳೆಎಣ್ಣೆ, ಆಲಿವ್ ಎಣ್ಣೆ ಮುಂತಾದವು ಶೇ.10ರ ಸ್ಲಾಬ್​ಗೆ ಬರುವ ಸಾಧ್ಯತೆ ಇದೆ.

ಹಾಗೇ, ಶೇ.10 ಸ್ಲಾಬ್​ನಲ್ಲಿರುವ ಮೊಬೈಲ್ ಫೋನ್, ಬಿಜಿನೆಸ್ ದರ್ಜೆ ವಿಮಾನ ಪ್ರಯಾಣ, ಸರ್ಕಾರಿ ಲಾಟರಿ, ದುಬಾರಿ ಪೇಂಟಿಂಗ್​ಗಳು ಮುಂತಾದವು ಶೇ.18ರ ಸ್ಲಾಬ್​ಗೆ ಬರುವ ಅಂದಾಜಿದೆ. ಹೀಗೆ ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸರಿಸುಮಾರು ಒಂದು ಲಕ್ಷ ಕೋಟಿ ರೂ. ಆದಾಯ ಹೆಚ್ಚುವರಿಯಾಗಿ ಹರಿದುಬರಬಹುದೆಂದು ನಿರೀಕ್ಷಿಸಲಾಗಿದೆ.

ಈಗ ಪ್ರತಿ ತಿಂಗಳು ಸುಮಾರು ಒಂದು ಲಕ್ಷ ಕೋಟಿ ರೂ. ಜಿಎಸ್​ಟಿ ಆದಾಯ ಸಂಗ್ರಹ ಆಗುತ್ತಿದೆಯಾದರೂ ಅದು ನಿರೀಕ್ಷಿತ ಪ್ರಮಾಣದಲ್ಲಿಲ್ಲ. ಹೀಗಾಗಿ, ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡಬೇಕಾದ ಪಾಲನ್ನು ಸರಿಯಾಗಿ ಕೊಡಲಾಗುತ್ತಿಲ್ಲ. ಈ ಕುರಿತಂತೆ ಕೆಲ ರಾಜ್ಯಗಳ ಹಣಕಾಸು ಸಚಿವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಅಹವಾಲನ್ನೂ ಮಂಡಿಸಿದ್ದೂ ಆಗಿದೆ. ಈ ನಡುವೆ, ಜಿಎಸ್​ಟಿ ವಂಚನೆ ಕೂಡ ನಡೆಯುತ್ತಿದ್ದು, ಅದನ್ನು ನಿಯಂತ್ರಿಸಲು ಸರ್ಕಾರಿ ಸಂಸ್ಥೆಗಳು ಸಾಹಸಪಡುತ್ತಿವೆ.

ಕರ್ನಾಟಕದಲ್ಲಿ ಜಿಎಸ್​ಟಿ ಜಾರಿಗೆ ಬಂದ ನಂತರದಲ್ಲಿ ಈವರೆಗೆ 800 ಕೋಟಿ ರೂ.ಗಳಷ್ಟು ತೆರಿಗೆ ವಂಚನೆಯಾಗಿರುವುದನ್ನು ಪತ್ತೆಹಚ್ಚಲಾಗಿದೆ. ದೇಶವ್ಯಾಪಿ ತೆಗೆದುಕೊಂಡರೆ ಈ ಪ್ರಮಾಣ 90 ಸಾವಿರ ಕೋಟಿ ರೂ.ಗಿಂತ ಹೆಚ್ಚಿದೆ ಎಂಬುದು ಸುಲಭದಲ್ಲಿ ಕಡೆಗಣಿಸುವಂತಹ ಸಂಗತಿಯಲ್ಲ.

ನಮ್ಮಲ್ಲಿ ಯಾವುದೇ ಹೊಸ ವ್ಯವಸ್ಥೆ ಬರುವಾಗ ಒಂದಷ್ಟು ಗೊಂದಲ, ತೊಡಕು ಇದ್ದೇ ಇರುತ್ತವೆ. ಆದರೆ ಅಂಥ ಅಡೆತಡೆಗಳನ್ನು ನಿವಾರಿಸಿಕೊಂಡು ಮುಂದೆ ನಡೆಯುವುದು ಮುಖ್ಯವಾಗುತ್ತದೆ. ಜಿಎಸ್​ಟಿ ವಿಚಾರದಲ್ಲಿ ಈ ಕುರಿತು ವ್ಯವಸ್ಥೆ ಇರುವುದು ಗಮನಾರ್ಹ. ಜಿಎಸ್​ಟಿ ತೆರಿಗೆ ದರ ನಿರ್ಧರಿಸುವಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ.

ಎಲ್ಲ ರಾಜ್ಯಗಳ ಹಣಕಾಸು ಸಚಿವರನ್ನು ಒಳಗೊಂಡ ಜಿಎಸ್​ಟಿ ಮಂಡಳಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತದೆ. ಈ ಹಿಂದೆಯೂ ಅನೇಕ ಬಾರಿ ಇಂಥ ನೀತಿನಿರ್ಧಾರಗಳು ಹೊರಹೊಮ್ಮಿವೆ. ಜಾಗತಿಕ ಆರ್ಥಿಕ ಹಿಂಜರಿತದ ಬಿಸಿ ಭಾರತಕ್ಕೂ ತಟ್ಟಿದ್ದು, ಕೇಂದ್ರ ಸರ್ಕಾರ ಅನೇಕ ಒತ್ತಡಗಳನ್ನು ಎದುರಿಸುತ್ತಿದೆ. ಇಂಥ ಸಂದರ್ಭದಲ್ಲಿ, ಜಿಎಸ್​ಟಿಯನ್ನು ಇನ್ನಷ್ಟು ಜನಪರವಾಗಿಸುವತ್ತ ಮತ್ತು ಗೊಂದಲಮುಕ್ತವಾಗಿಸುವತ್ತ ಯತ್ನ ನಡೆಯಲೆಂಬುದೇ ಆಶಯ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...