More

    ವಿಶ್ವಾಸಾರ್ಹತೆ ಮುಖ್ಯ: ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ತಡೆಗೆ ಕಠಿಣ ಕಾನೂನು

    ಸರ್ಕಾರಿ ಹುದ್ದೆಗಳ ನೇಮಕಾತಿಗಾಗಿ ಏರ್ಪಡಿಸಲಾಗುವ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗುವ ಪ್ರಕರಣಗಳ ಅಪರಾಧಿಗಳಿಗೆ 10 ವರ್ಷದವರೆಗೆ ಜೈಲು ಹಾಗೂ 10 ಲಕ್ಷದಿಂದ 1 ಕೋಟಿ ರೂಪಾಯಿವರೆಗೂ ದಂಡ ವಿಧಿಸಬಹುದಾದ ಕಠಿಣ ಮಸೂದೆಯನ್ನು ಗುಜರಾತ್​ನಲ್ಲಿ ರಾಜ್ಯದಲ್ಲಿ ಅಂಗೀಕರಿಸಲಾಗಿದೆ. ಗುಜರಾತ್ ಸಾರ್ವಜನಿಕ ಪರೀಕ್ಷೆ (ಅಕ್ರಮ ವಿಧಾನಗಳ ತಡೆಗಟ್ಟುವಿಕೆ) ಮಸೂದೆಗೆ ವಿಧಾನಸಭೆ ಅಂಗೀಕಾರ ನೀಡಿದೆ. ಆಡಳಿತಾರೂಢ ಬಿಜೆಪಿ ಜತೆಗೆ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಕೈಜೋಡಿಸುವ ಮೂಲಕ ಅವಿರೋಧದ ನಿರ್ಣಯ ಕೈಗೊಂಡಿರುವುದು ವಿಶೇಷವಾಗಿದೆ.

    ಇದನ್ನೂ ಓದಿ: ಬೇರೆ ಏನನ್ನಾದರೂ ಬರೆದಿರುವ ನೋಟುಗಳನ್ನು ಸ್ವೀಕರಿಸುವಂತಿಲ್ಲವೇ?: ಇಲ್ಲಿದೆ ಸತ್ಯಾಂಶ

    ಕಳೆದೆರಡು ವರ್ಷಗಳಲ್ಲಿ ಗುಜರಾತ್​ನಲ್ಲಿ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದವು. ಕಳೆದ ವರ್ಷ ಇಂತಹ ದಂಧೆಯಲ್ಲಿ ತೊಡಗಿದ್ದ ಅಂತರರಾಜ್ಯ ಗ್ಯಾಂಗ್ ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಸರ್ಕಾರಿ ನೇಮಕಾತಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಮೌಲ್ಯಮಾಪನ ಅಕ್ರಮಗಳ ಪಿಡುಗು ದೇಶವ್ಯಾಪಿಯಾಗಿ ಕಂಡುಬರುತ್ತಿದೆ. ಕೆಲ ದಿನಗಳ ಹಿಂದೆ ರಾಜಸ್ತಾನದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ 46 ಅಭ್ಯರ್ಥಿಗಳು ಸೇರಿದಂತೆ 49 ಮಂದಿಯನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲಂತೂ ನೇಮಕಾತಿ ಪರೀಕ್ಷೆಗಳ ಅಕ್ರಮ ದೇಶಾದ್ಯಂತ ಸದ್ದು ಮಾಡಿದೆ. ಪೊಲೀಸ್ ಸಬ್​ಇನ್​ಸ್ಪೆಕ್ಟರ್ ನೇಮಕಾತಿ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಐಪಿಎಸ್ ಅಧಿಕಾರಿಯೇ ಬಂಧನಕ್ಕೊಳಗಾಗಿರುವುದು ಸರ್ಕಾರಕ್ಕೆ ಮುಜುಗರ ತಂದಿದೆ. 545 ಹುದ್ದೆಗಳ ನೇಮಕಾತಿಯ ಈ ಹಗರಣವು 500 ಕೋಟಿ ರೂಪಾಯಿ ಮೀರಿದ ಅವ್ಯವಹಾರ ಎಂದು ವಿರೋಧಪಕ್ಷಗಳು ಆರೋಪಿಸಿವೆ. ಇದಲ್ಲದೆ, ಕೆಪಿಎಸ್​ಸಿ ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪವೂ ಕೇಳಿಬಂದಿತ್ತು.

    ಇದನ್ನೂ ಓದಿ: ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ; ಮಕ್ಕಳಿಬ್ಬರ ಪ್ರಾಣ ಉಳಿಸಿತೇ ನಿದ್ರೆ-ಆಟ!?

    ನಮ್ಮಲ್ಲಿ ಸಹ ಕಾನೂನು ಇದ್ದರೂ, ಪರೀಕ್ಷಾ ಅಕ್ರಮ ನಡೆದಿರುವುದು ಪ್ರಾಮಾಣಿಕ ಅಭ್ಯರ್ಥಿಗಳಲ್ಲಿ ನಿರಾಸೆ ಮೂಡಿಸುವಂತಾಗಿದೆ. ಅಥವಾ ಇನ್ನಷ್ಟು ಕಠಿಣ ಕಾನೂನಿನ ಅಗತ್ಯ ಇದೆಯೇ ಎಂಬುದನ್ನು ಸಂಬಂಧಪಟ್ಟವರು ಪರಿಶೀಲಿಸಬೇಕು. ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಕಾಪಾಡಿಕೊಳ್ಳದಿದ್ದರೆ ಸರ್ಕಾರಿ ವ್ಯವಸ್ಥೆಯ ಮೇಲೆ ಜನರ ನಂಬಿಕೆ ಇನ್ನಷ್ಟು ಕುಸಿಯುತ್ತದೆ. ಬೇರೆ ಬೇರೆ ರಾಜ್ಯಗಳು ಈ ನಿಟ್ಟಿನಲ್ಲಿ ಗಂಭೀರವಾಗಿ ಆಲೋಚಿಸಿ ಮುಂದಡಿ ಇಡುತ್ತಿರುವುದು ಸ್ವಲ್ಪ ಸಮಾಧಾನದ ಸಂಗತಿ.

    ಇದನ್ನೂ ಓದಿ: ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ; ಮಕ್ಕಳಿಬ್ಬರ ಪ್ರಾಣ ಉಳಿಸಿತೇ ನಿದ್ರೆ-ಆಟ!?

    ರಾಜಧಾನಿಯಲ್ಲಿ ಬಿಬಿಎಂಪಿ ಖಾತಾ ಆಂದೋಲನ, ಆಸ್ತಿವಂತರಿಗೆ ಸದವಕಾಶ: ಎಂದಿನಿಂದ, ಎಲ್ಲೆಲ್ಲಿ?; ಇಲ್ಲಿದೆ ವಿವರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts