ಸಂಪಾದಕೀಯ| ಅನಗತ್ಯ ವಿವಾದವೇಕೆ?

JK assembly

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂಪಡೆದು ಐದು ವರ್ಷಗಳೇ ಕಳೆದಿವೆ (2019ರ ಆಗಸ್ಟ್). ಮುಖ್ಯವಾಗಿ, ಕಣಿವೆ ಪ್ರದೇಶದಿಂದ 370ನೇ ವಿಧಿಯನ್ನು ಹಿಂಪಡೆಯುವ ಬಗ್ಗೆ ಕೇಂದ್ರದ ನಿರ್ಧಾರ ತರಾತುರಿಯಲ್ಲಿ ಕೈಗೊಂಡಿದ್ದಲ್ಲ. ಹಲವು ದಶಕಗಳ ಬೇಡಿಕೆ, ಅಲ್ಲಿಯ ಜನರ ಸ್ಥಿತಿಗತಿ, ದೇಶದ ಎಲ್ಲ ಕಾನೂನುಗಳು ಜಮ್ಮು-ಕಾಶ್ಮೀರದಲ್ಲಿ ಜಾರಿಯಾಗದ ಅಸಹಾಯಕತೆ ಇದೆಲ್ಲವನ್ನು ಅವಲೋಕಿಸಿಯೇ ವಿಶೇಷ ಸ್ಥಾನಮಾನ ಹಿಂಪಡೆಯಲಾಯಿತು. ಅಲ್ಲದೆ, ಈ ನಿರ್ಧಾರ ಕೈಗೊಂಡ ಬಳಿಕ ಅಲ್ಲಿನ ಪರಿಸ್ಥಿತಿಯಲ್ಲಿ ಸಾಕಷ್ಟು ಸುಧಾರಣೆಯಾಯಿತು, ದೇಶದ ಬೇರೆ ಬೇರೆ ಭಾಗಗಳಿಂದ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿತು ಎಂಬುದು ವಾಸ್ತವ.

ಹೀಗಾಗಿ, ಜಮ್ಮು-ಕಾಶ್ಮೀರದಿಂದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿರುವುದು ಈಗ ಮುಗಿದು ಹೋದ ಅಧ್ಯಾಯವಾಗಿದೆ. ವಿಧಾನಸಭೆ ಚುನಾವಣೆಯೂ ಶಾಂತಿಯುತವಾಗಿ ನಡೆದು ಸರ್ಕಾರ ರಚನೆಯಾಗಿದೆ. ಭಯೋತ್ಪಾದನೆ ನಿಗ್ರಹ, ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ, ಉಗ್ರರ ನುಸುಳುವಿಕೆ ನಿಯಂತ್ರಣ, ಅಭಿವೃದ್ಧಿ ಕಾರ್ಯಗಳಿಗೆ ವೇಗ, ಮೂಲಸೌಕರ್ಯಗಳ ವಿಸ್ತರಣೆ, ಉದ್ಯೋಗ ಸೃಷ್ಟಿ ಸೇರಿದಂತೆ ಜಮ್ಮು-ಕಾಶ್ಮೀರದ ಮುಂದೆ ಪ್ರಸಕ್ತ ಹಲವು ಜ್ವಲಂತ ಸವಾಲುಗಳಿವೆ. ಇವುಗಳಿಗೆ ಪರಿಹಾರ ಕಂಡುಕೊಳ್ಳಬೇಕಿರುವುದು ಮತ್ತು ಶಾಂತಿ-ಸುವ್ಯವಸ್ಥೆ ಸ್ಥಾಪಿಸಿ, ಅಭಿವೃದ್ಧಿಗೆ ಆದ್ಯತೆ ನೀಡುವುದು ಅಗತ್ಯವಾಗಿದೆ.

ಆದರೆ, ಈಗ ಅಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ನ್ಯಾಷನಲ್ ಕಾನ್ಪರೆನ್ಸ್ ಸರ್ಕಾರ ಮೊದಲ ಅಧಿವೇಶನದಲ್ಲೇ ರಾಜಕೀಯ ಲಾಭಕ್ಕಾಗಿ ವಿಶೇಷ ಸ್ಥಾನಮಾನದ ಕುರಿತು ವಿವಾದ ಎಬ್ಬಿಸಿರುವುದು ಸೂಕ್ತವಲ್ಲ. ಕೇಂದ್ರಾಡಳಿತ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಮರುಸ್ಥಾಪಿಸಲು ಚುನಾಯಿತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯವನ್ನು ಜಮ್ಮು-ಕಾಶ್ಮೀರ ವಿಧಾನಸಭೆ ಅಂಗೀಕರಿಸುವ ಮೂಲಕ ಅನಗತ್ಯ ವಿವಾದವನ್ನು ಸೃಷ್ಟಿಸಿದೆ. ಪ್ರತಿಪಕ್ಷ ಬಿಜೆಪಿಯ ಸದಸ್ಯರು ಗುರುವಾರ ನಿರ್ಣಯದ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರ ನಡುವೆ ತಳ್ಳಾಟ, ನೂಕಾಟವೂ ನಡೆದಿದೆ.

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನವನ್ನು ತೆಗೆದುಹಾಕುವುದು ಕಾಂಗ್ರೆಸ್ ನೇತೃತ್ವದ ಐಎನ್​ಡಿಐ ಕೂಟದ ಬಯಕೆಯಾಗಿದೆ. ಆದರೆ, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸಿದ್ದ ಸಂವಿಧಾನದ 370ನೇ ವಿಧಿಯನ್ನು ಮರಳಿ ಸ್ಥಾಪಿಸಲು ಜಗತ್ತಿನ ಯಾವ ಶಕ್ ಸಾಧ್ಯವಿಲ್ಲ’ ಎಂದಿದ್ದಾರೆ. ಗೃಹ ಸಚಿವ ಅಮಿತ್ ಷಾ ಕೂಡ ಪ್ರಧಾನಿಯ ಮಾತುಗಳನ್ನು ಪುನರುಚ್ಚರಿಸಿದ್ದಾರೆ. ಜನತೆಗೆ ನೀಡಿದ ವಾಗ್ದಾನಗಳನ್ನು ಈಡೇರಿಸುವುದು, ಸ್ಥಳೀಯ ಸಮಸ್ಯೆಗಳಿಗೆ ಪರಿಹಾರದ ಮಾರ್ಗ ಕಂಡುಕೊಳ್ಳುವುದನ್ನು ಬಿಟ್ಟು ಜಮ್ಮು-ಕಾಶ್ಮೀರ ಸರ್ಕಾರ ಆರಂಭದಲ್ಲೇ ಸಂಘರ್ಷದ ವಾತಾವರಣ ಸೃಷ್ಟಿಸುತ್ತಿರುವುದು ಪ್ರಜಾತಂತ್ರ ಮೌಲ್ಯಗಳಿಗೆ ವಿರುದ್ಧವಾದುದು. ರಾಷ್ಟ್ರಹಿತದ ನಿಟ್ಟಿನಲ್ಲಿ ಕೈಗೊಂಡ ನಿರ್ಣಯಗಳನ್ನು ಒಪ್ಪಿಕೊಂಡು, ಈಗಿನ ವಾಸ್ತವವನ್ನು ಅರ್ಥ ಮಾಡಿಕೊಂಡು ಅಲ್ಲಿನ ಸರ್ಕಾರ ಮುಂದಡಿ ಇಡುವುದು ಕ್ಷೇಮಕರ. ಹಿಂಸೆ, ದ್ವೇಷ, ಪ್ರತ್ಯೇಕತಾ ಭಾವನೆಯಿಂದ ಕಾಶ್ಮೀರ ಈಗಾಗಲೇ ಸಾಕಷ್ಟು ಹಾನಿ ಅನುಭವಿಸಿದೆ ಎಂಬುದನ್ನು ರಾಜಕಾರಣಿಗಳು ಅರ್ಥ ಮಾಡಿಕೊಳ್ಳಬೇಕು.

ಪಾಕ್​ಗೆ ತೆರಳಲು ಅನುಮತಿ ನೀಡದ ಕೇಂದ್ರ ಸರ್ಕಾರ; ಹೈಬ್ರಿಡ್​ ಮಾದರಿಯಲ್ಲಿ Champions Trophy?

ಉಸಿರಿರುವವರೆಗೂ Darshan ನನ್ನ ಮಗ, ಅದು ಎಂದಿಗೂ ಬದಲಾಗಲ್ಲ: ಸುಮಲತಾ ಅಂಬರೀಷ್​

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…