More

    ವಿದ್ಯಾಸಿರಿ ವೇತನ ಬಿಡುಗಡೆ ಮಾಡಿ

    ಬೆಳಗಾವಿ: ವಿದ್ಯಾಸಿರಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಖಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

    2020-21ನೇ ಸಾಲಿನಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ವೇತನ ಬಿಡುಗಡೆ ಮಾಡಿಲ್ಲ. ಹೀಗಾಗಿ ಬಡ ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಹಾಗಾಗಿ, ಸರ್ಕಾರವೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

    ಈಗಾಗಲೇ ಕೋವಿಡ್-19, ಲಾಕ್‌ಡೌನ್ ಇನ್ನಿತರ ಕಾರಣಗಳಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರವು ವಿದ್ಯಾಸಿರಿ ವೇತನ ನೀಡದ್ದರಿಂದ ಗ್ರಾಮೀಣ ಭಾಗದಿಂದ ನಗರ ಪ್ರದೇಶಗಳಿಗೆ ಕಲಿಯಲು ಬರುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಮಸ್ಯೆ ಎದುರಾಗಿದೆ. ಕೂಡಲೇ ವಿದ್ಯಾಸಿರಿ ವೇತನ ನೀಡಬೇಕು.

    ಇಲ್ಲದಿದ್ದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಮನವಿ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸಂಘಟನೆಯ ಪದಾಧಿಕಾರಿಗಳಾದ ಕಿರಣ ದುಕಾಂದಾರ, ರಮೇಶ ಪಾಟೀಲ, ಅಷ್ಪಾಕ್ ಸನದಿ, ದೀಪಕ ಮೊಟೇನವರ, ಪ್ರಕಾಶ ಸಂಗಮ ಸೇರಿದಂತೆ ನರ್ಸಿಂಗ್ ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts