ಶಿಕ್ಷಣದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ

ಹನೂರು: ಪ್ರತಿಯೊಬ್ಬರೂ ಓದಿನತ್ತ ಹೆಚ್ಚು ಗಮನಹರಿಸುವ ಮೂಲಕ ಶೈಕ್ಷಣಿಕ ಸಾಧನೆ ಮಾಡಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ಅಮೃತಬಿಂದು ಸಂಸ್ಥೆಯ ಸಂಸ್ಥಾಪಕ ಪ್ರಶಾಂತ್ ಅಭಿಪ್ರಾಯಪಟ್ಟರು.


ತಾಲೂಕಿನ ಮಲೆ ಮಹದೇಶ್ವರಬೆಟ್ಟ ತಪ್ಪಲಿನ ಇಂಡಿಗನತ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶನಿವಾರ ಚೇರ್ ವಿತರಿಸಿ ಮಾತನಾಡಿದರು.


ಇಂಡಿಗನತ್ತ ಗ್ರಾಮವು ಕಾಡಂಚಿನಲ್ಲಿದ್ದು, ಇಲ್ಲಿ ಹೆಚ್ಚಾಗಿ ಬಡವರ್ಗದ ಜನರು ಕೂಲಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಆದರೂ ಶಿಕ್ಷಣದ ಮಹತ್ವವನ್ನು ಮನಗಂಡಿರುವ ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿರುವುದು ಮೆಚ್ಚುಗೆ ಸಂಗತಿ. ಈ ಶಾಲೆಗೆ ಹಿಂದೆ ಭೇಟಿ ನೀಡಿದ್ದ ವೇಳೆ ಮಕ್ಕಳ ಹಿತದೃಷ್ಟಿಯಿಂದ ಸ್ಮಾರ್ಟ್ ಕ್ಲಾಸ್ ತರಗತಿಗೆ ಅನುಕೂಲವಾಗುವಂತೆ ಇಲ್ಲಿನ ಶಿಕ್ಷಕರು ಚೇರ್ ಕೊಡಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಲೆಯ ಎಲ್ಲ ಮಕ್ಕಳಿಗೆ ಚೇರ್‌ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಓದಿನ ಕಡೆ ಹೆಚ್ಚು ಒತ್ತು ನೀಡಬೇಕು ಎಂದು ತಿಳಿಸಿದರು.


ಸಂಸ್ಥೆಯ ಸದಸ್ಯ ಗಂಗಾಧರ್, ಶಿಕ್ಷಕರಾದ ರಾಘವೇಂದ್ರ, ಕೆಂಪರಾಜು ನಾಗಪ್ಪ ಇನ್ನಿತರರಿದ್ದರು.

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…