More

    ವಿಶ್ವ ಪರಿಸರ ದಿನ ಆಚರಿಸಿ ಮಕ್ಕಳಿಗೆ ಜಾಗೃತಿ ಮೂಡಿಸಿ; ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

    ಬೆಂಗಳೂರು: ಪರಿಸರದ ಸುಸ್ಥಿರ ಬೆಳವಣಿಗೆಯಲ್ಲಿ ಶಾಲಾ ಮಕ್ಕಳ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಜೂ.5ರಂದು ಶಾಲಾ ಹಂತದಲ್ಲಿ ‘ವಿಶ್ವ ಪರಿಸರ ದಿನ‘ ಆಚರಿಸಿ ಮಕ್ಕಳಿಗೆ ಜಾಗೃತಿ ಮೂಡಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

    ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ಮಕ್ಕಳಿಗೆ ದತ್ತು ನೀಡಿ ಅವುಗಳನ್ನು ಪೋಷಿಸುವುದರ ಮೂಲಕ ಶಾಲೆಗಳಲ್ಲಿ ಹಸಿರು ವಾತಾವರಣ ಸೃಷ್ಟಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.

    ಇದನ್ನೂ ಓದಿ: ನೀರು ತುಂಬಿದ್ದ ಬಕೆಟ್‌ ಒಳಗೆ ತಲೆಕೆಳಗಾಗಿ ಬಿದ್ದು 13 ತಿಂಗಳ ಮಗು ಮೃತ್ಯು

    ಎಸ್‌ಡಿಎಂಸಿ ನೆರವಿನೊಂದಿಗೆ ಶಾಲಾ ಮಕ್ಕಳಿಂದ ಜಾಥಾ ಹೊರಟು ಘೋಷಣೆಗಳನ್ನು ಕೂಗಿ ಸಮುದಾಯಗಳಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದು. ಶಾಲಾ ಆವರಣದಲ್ಲಿ ಹೊಂಗೆ, ನೇರಳೆ, ಮಾವು, ಸೀಬೆ, ನೆಲ್ಲಿ, ನಿಂಬೆ, ಹಲಸು, ದಾಳಿಂಬೆ, ಸಪೋಟ ಸೇರಿ ಇತರೆ ಹೂ ಮತ್ತು ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸುವಂತೆ ಸಲಹೆ ನೀಡಿದ್ದಾರೆ.

    ಇದನ್ನೂ ಓದಿ: ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್..!

    ಶಾಲೆಗಳ ಸುತ್ತಲಿನ ಬೀಳು ಭೂಮಿಯಲ್ಲಿ ಗಿಡಗಳನ್ನು ನೆಡಲು ಕೃಷಿ ಇಲಾಖೆ ಸಮೀಕ್ಷೆ ಮಾಡಿದ್ದು, ಶಾಲೆಗಳನ್ನು ಮ್ಯಾಪಿಂಗ್ ಮಾಡಲಾಗಿದೆ. ಕೃಷಿ ಇಲಾಖೆ, ತೋಟಗಾರಿಕೆ, ಅರಣ್ಯ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ನರೇಗಾ, ಆಯುಷ್ ಹಾಗೂ ಇತರೆ ಇಲಾಖೆಗಳು ಸಸ್ಯಗಳನ್ನು ನೆಡುವ ಕಾರ್ಯದಲ್ಲಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸುವಂತೆ ಸೂಚಿಸಿದ್ದಾರೆ.

    ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವುದು ಹಾಗೂ ಪ್ಲಾಸ್ಟಿಕ್ ಮುಕ್ತ ಶಾಲೆಯನ್ನಾಗಿಸುವುದು. ಮಕ್ಕಳಿಗೆ ತ್ಯಾಜ್ಯ ವಿಲೇವಾರಿ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಿದ್ದಾರೆ.

    ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ; ಬೆಂಗಳೂರಿನಲ್ಲಿ ಇಂದು, ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts