More

    ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಶೇ.90 ಪೂರ್ಣ

    ಬೆಳಗಾವಿ/ಚಿಕ್ಕೋಡಿ: ಕರೊನಾ ವೈರಸ್ ಆತಂಕದ ಮಧ್ಯೆಯೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸುಗಮವಾಗಿ ನಡೆಯುತ್ತಿದೆ. ಈಗಾಗಲೇ ಶೇ.90ರಷ್ಟು ಪ್ರಕ್ರಿಯೆ ಪೂರ್ಣಗೊಂಡಿದ್ದು, ಕನ್ನಡ ಮತ್ತು ಉರ್ದು ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವಷ್ಟೇ ಬಾಕಿ ಉಳಿದಿದೆ.

    ಆರಂಭಿಕ ಹಂತದಲ್ಲಿ ಬೆಳಗಾವಿಯ 8 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯುತ್ತಿತ್ತು. ಸದ್ಯ 3 ಕೇಂದ್ರಗಳಲ್ಲಿ 300 ಶಿಕ್ಷಕರು ಮೌಲ್ಯಮಾಪನ ಕರ್ತವ್ಯದಲ್ಲಿ ತೊಡಗಿದ್ದಾರೆ. ಜು.23 ರಂದು ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿ ಮಹಾದೇವ ಬೆಳ್ಳೆಣವರ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

    ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನಿಪ್ಪಾಣಿ ನಗರದ ಆರು ಕೇಂದ್ರಗಳಲ್ಲಿ ಶೇ.98 ಮೌಲ್ಯಮಾಪನ ಆಗಿದ್ದು, ಮಂಗಳವಾರ ಪೂರ್ಣಗೊಳ್ಳಲಿದೆ ಎಂದು ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts