18 C
Bangalore
Friday, December 6, 2019

ಎಸ್ಸಿಎಸ್ಟಿ ವಿದ್ಯಾರ್ಥಿಗಳ ವಿದೇಶಿ ಶಿಕ್ಷಣಕ್ಕೆ ಸರ್ಕಾರಿ ವೆಚ್ಚ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬೆಂಗಳೂರು: ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ಎಸ್​ಸಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಶೀಘ್ರ ಖುಷಿ ಸುದ್ದಿಯೊಂದು ಹೊರಬೀಳಲಿದೆ.

ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ಎಸ್​ಸಿ ವಿದ್ಯಾರ್ಥಿಗಳ ಬೆನ್ನೆಲುಬಾಗಿ ನಿಲ್ಲಲು ಸಮಾಜ ಕಲ್ಯಾಣ ಇಲಾಖೆ ಈಗಾಗಲೇ ಯೋಜನೆ ರೂಪಿಸಿದೆ. ಆದರೆ, ಅನುದಾನ ನೀಡಿಕೆ ಮಿತಿ ಇದೆ. ಇನ್ನು ಮುಂದೆ ಈ ಮಿತಿ ತೆಗೆದು ಹಾಕಲು ಸರ್ಕಾರ ನಿರ್ಧರಿಸಿದ್ದು, ಸಂಪೂರ್ಣ ವೆಚ್ಚ ಭರಿಸಲು ಉದ್ದೇಶಿಸಿದೆ. ಈವರೆಗೆ ಸೂಕ್ತ ದಾಖಲೆ ಒದಗಿಸಿದಲ್ಲಿ ಶಿಕ್ಷಣ ಸಂಸ್ಥೆ ಪ್ರವೇಶ ಶುಲ್ಕ, ಇತರೆ ವೆಚ್ಚಗಳ ಪೈಕಿ ಶೇ.60ರಿಂದ 75ರವರೆಗೆ ಕೋರ್ಸ್​ಗೆ ಅನುಸಾರವಾಗಿ ಸರ್ಕಾರ ವೆಚ್ಚ ಭರಿಸುತ್ತಿತ್ತು. ವಿದ್ಯಾರ್ಥಿಗಳು ಮುಂಚಿತವಾಗಿ ಹೆಸರು ನೋಂದಾಯಿಸಿ, ಬಳಿಕ ಹಣಪಾವತಿ ರಸೀದಿಗಳನ್ನು ಸರ್ಕಾರಕ್ಕೆ ಸಲ್ಲಿಸಿದರೆ ಮಾತ್ರ ವಿದ್ಯಾರ್ಥಿ ವೇತನ ಮರುಪಾವತಿಯಾಗುತ್ತಿತ್ತು. ಈ ವೇಳೆ ಅನೇಕ ಗೊಂದಲಗಳಾಗು ತ್ತಿತ್ತು. ವಿವಿಧ ವಿಶ್ವವಿದ್ಯಾಲಯಗಳು ಸರ್ಕಾರದ ಯೋಜನೆ ವ್ಯಾಪ್ತಿಗೆ ಬರುತ್ತಿರಲಿಲ್ಲ.

ಇದನ್ನು ತಪ್ಪಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೊಸ ಆಲೋಚನೆ ಹೊರಗೆಡಹಿದ್ದಾರೆ. ಎಸ್​ಸಿ ವಿದ್ಯಾರ್ಥಿಗಳು ವಿದೇಶಿ ಅಧ್ಯಯನಕ್ಕೆ ತೆರಳುವುದು ಸ್ಪಷ್ಟವಾದಲ್ಲಿ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಯಿಂದ ಆಫರ್ ಲೆಟರ್ ಸರ್ಕಾರಕ್ಕೆ ಸಲ್ಲಿಸಿದರೆ ಸಾಕು. ಸರ್ಕಾರವೇ ಮುಂಚಿತವಾಗಿ ಶುಲ್ಕದ ಜತೆಗೆ ಸಂಪೂರ್ಣ ವೆಚ್ಚವನ್ನು ಪಾವತಿ ಮಾಡಲಿದೆ. ಈ ಬಗ್ಗೆ ನಿಯಮಗಳ ರೂಪುರೇಷೆ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರವೇ ಅನುಷ್ಠಾನ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದೇಶದಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಸಂಪೂರ್ಣ ವೆಚ್ಚ ಭರಿಸಲು ಸರ್ಕಾರ ನಿರ್ಧರಿಸಿದೆ. ಮುಂದಿನ ವಾರ ಪರಿಷ್ಕೃತ ಯೋಜನೆಗೆ ಚಾಲನೆ ನೀಡಲಾಗುತ್ತದೆ.

| ಪ್ರಿಯಾಂಕ್ ಖರ್ಗೆ ಸಮಾಜ ಕಲ್ಯಾಣ ಸಚಿವ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...