More

    ಮಾ.9 ರಿಂದ ಆರಂಭವಾಗಲಿರುವ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ!

    ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.9 ರಿಂದ ಆರಂಭವಾಗಲಿದೆ. ಪರೀಕ್ಷಗೆ ಹಿಜಾಬ್ ಧರಿಸಿ ಬರುವಂತಿಲ್ಲ. ಪ್ರತಿಯೊಬ್ಬರು ಶಾಲಾ ಸಮವಸ್ತ್ರ ಧರಿಸಿ ಬರಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ತಿಳಿಸಿದ್ದಾರೆ.

    ಮಾ.9 ರಿಂದ ಪಿಯು ಪರೀಕ್ಷೆ ಪ್ರಾರಂಭವಾಗಲಿದೆ. ಎಲ್ಲಾ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.ಮಕ್ಕಳು ಅರ್ಧಗಂಟೆ ಮುಂಚೆ ಪರೀಕ್ಷಾ ಕೇಂದ್ರಗಳಿಗೆ ಬರಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೋಠಡಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆಂದಿದ್ದಾರೆ.

    ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೆಲವು ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಪಿಯು ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ ಎಂದಿದ್ದಾರೆ.

    ಇದನ್ನೂ ಓದಿ: ಕೈಲಾಸ ದೇಶಕ್ಕಾಗಿ ಸಲ್ಲಿಸಿದ ಅರ್ಜಿ ವಜಾ ಮಾಡಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ

    ಅನಧಿಕೃತ ಶಾಲೆಗಳ ಕುರಿತಾಗಿ ಮಾತನಾಡಿದ ಅವರು, ಈಗ ಪರೀಕ್ಷೆ ಕಾಲವಾಗಿದೆ. ಮಕ್ಕಳಿಗೆ ತೊಂದರೆಯಾಗಬಾರದು. ಪರೀಕ್ಷೆ ಮುಗಿದ ಬಳಿಕ ಅನಧಿಕೃತ ಶಾಲೆ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. ವೆಬ್ ಸೈಟ್​​ನಲ್ಲಿ ಶಾಲೆಗಳ ಪಟ್ಟಿಹಾಕಲಾಗುತ್ತದೆ. ಮುಂದಿನ ದಿನಗಳಲ್ಲಿ ಪೋಷಕರು ವೆಬ್ ಸೈಟ್​​ನಲ್ಲಿ ನೋಡಿಕೊಂಡು ಮಕ್ಕಳನ್ನು ಶಾಲೆಗೆ ಸೇರಿಸಬೇಕು ಎಂದು ಪೋಷಕರಿಗೆ ಸೂಚನೆ ನೀಡಿದ್ದಾರೆ.

    ಸಾವಿರಾರು ಕೋಟಿ ಲೂಟಿ ಮಾಡಿ ಸಿಕ್ಕಿ ಬಿದ್ದ ಡಿಕೆಶಿಗೆ ಇಲ್ಲದ ಮುಜಗರ ನಮಗೇಕೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts