More

    ಸಂವಿಧಾನ ತಿದ್ದುಪಡಿಯಿಂದಷ್ಟೇ ಮಾತೃಭಾಷೆಗೆ ಒತ್ತು: ಭೈರಪ್ಪ, ಕಂಬಾರ, ಮನು ಬಳಿಗಾರ್ ಪತ್ರ

    ಬೆಂಗಳೂರು: ಐದನೇ ತರಗತಿವರೆಗಿನ ಶಿಕ್ಷಣವನ್ನು ಮಾತೃಭಾಷೆಯಲ್ಲೇ ನೀಡುವುದರ ಅಗತ್ಯವನ್ನು ಪ್ರತಿಪಾದಿಸುವುದರ ಜತೆಗೆ ಈ ನೀತಿಯು 75ನೇ ಸ್ವಾತಂತ್ರ್ಯ ದಿನವಾದ 2022ರ ಆ. 15ರಿಂದ ಜಾರಿಗೆ ಬರಲಿದೆ ಎಂದು ಪ್ರಕಟಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮವನ್ನು ಸರಸ್ವತಿ ಸಮ್ಮಾನ್ ಪುರಸ್ಕೃತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ, ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಹಾಗೂ ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಸ್ವಾಗತಿಸಿದ್ದಾರೆ.

    ಈ ಕುರಿತು ಪ್ರಧಾನಿಗೆ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮೂವರೂ ಪತ್ರ ಬರೆದಿದ್ದಾರೆ. ‘ಮಾತೃಭಾಷೆ ಅಥವಾ ರಾಜ್ಯಭಾಷೆಯಲ್ಲಿಯೇ ಶಿಕ್ಷಣ ಕೊಡಿಸಬೇಕಾದ ಅಗತ್ಯವನ್ನು ಮನವರಿಕೆ ಮಾಡಿಕೊಡಲು ಕಳೆದ ಆಗಸ್ಟ್‌ನಲ್ಲಿ ನಾವು ಮೂವರೂ ಪತ್ರ ಬರೆದಿದ್ದೆವು. 21ನೇ ಶತಮಾನದಲ್ಲಿ ಶಾಲಾ ಶಿಕ್ಷಣ ಸಮಾವೇಶದಲ್ಲಿ ಮಾತನಾಡುತ್ತ ಪ್ರಧಾನಿಯವರು, ಮಾತೃಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ಇರಬೇಕು ಎಂಬುದನ್ನು ಒತ್ತಿ ಹೇಳಿದ್ದಾರೆ. ಅವರ ಹೇಳಿಕೆ ಸ್ವಾಗತಾರ್ಹ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    ಇದನ್ನೂ ಓದಿ: ಸಿರಗುಪ್ಪದಲ್ಲಿ ಗ್ರಾಮಸ್ಥರ ಪ್ರತಿಭಟನೆಗೆ ಮಣಿದು ಮದ್ಯದಂಗಡಿ ಮಚ್ಚಿಸಿದ ಅಬಕಾರಿ ಇಲಾಖೆ

    ‘ಇದುವರೆಗೆ ಕಸಾಪ ಮತ್ತು ಕನ್ನಡಿಗರು ಮಾಡುತ್ತಿದ್ದ ಆಗ್ರಹಕ್ಕೆ ಪ್ರಧಾನಿ ಮೋದಿ ಧ್ವನಿಯೊದಗಿಸಿದ್ದಾರೆ. ಆದರೆ ಇದು ಸಾಧ್ಯವಾಗಬೇಕಾದರೆ ಸಂವಿಧಾನದ 21(ಎ) ಪರಿಚ್ಛೇದಕ್ಕೆ ತಿದ್ದುಪಡಿ ತರುವುದು ಅವಶ್ಯಕ’ ಎಂದಿದ್ದಾರೆ. ಈ ತಿದ್ದುಪಡಿಯನ್ನು ಸಾಧ್ಯವಾದಷ್ಟು ಬೇಗ ಜಾರಿಗೆ ತರಬೇಕೆಂದು ಪ್ರಧಾನಿ ಅವರನ್ನು ಆಗ್ರಹಿಸಿದ್ದು, ಇದಕ್ಕೆ ಪೂರಕವಾಗಿ ಪ್ರಧಾನಿ ಮೇಲೆ ಒತ್ತಡ ತರುವಂತೆ ಮುಖ್ಯಮಂತ್ರಿಯವರನ್ನು ಪತ್ರದಲ್ಲಿ ಕೋರಿದ್ದಾರೆ.

    ಪೊಲೀಸ್ ಅಧಿಕಾರಿಗಳೇ, ರಾಜೀನಾಮೆ ಕೊಟ್ಟು ತರಕಾರಿ ಮಾರೋಕೆ ಹೋಗಿ! – ಬಂಗಾಳ ಬಿಜೆಪಿ ಮುಖ್ಯಸ್ಥರ ವಾಗ್ದಾಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts