ಆನ್​ಲೈನ್​ ಪಾಠದ ಹೆಸರಲ್ಲಿ ಶುಲ್ಕ ವಸೂಲಿಗೆ ನಡೆಯುತ್ತಿದೆ ತಂತ್ರ, ಶಿಕ್ಷಣ ಸಂಸ್ಥೆಗಳಿಗೆ ಇಲಾಖೆ ನೀಡಿರುವ ಎಚ್ಚರಿಕೆ ಏನು?

ಬೆಂಗಳೂರು: ದೇಶಾದ್ಯಂತ ಕರೊನಾ ಸಂಕಷ್ಟದಿಂದ ಪಾರಾಗಲು ಎರಡನೇ ಹಂತದ ಲಾಕ್​ಡೌನ್​ ಜಾರಿಯಲ್ಲಿದೆ. ನಾಳೆಯಿಂದ (ಏ.20) ಕೆಲ ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದೆಯಾದರೂ, ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ಸದ್ಯಕ್ಕಂತೂ ಅವಕಾಶವಿಲ್ಲ. ಸಾರ್ವಜನಿಕ ಶಿಕ್ಷಣ ಸಂಸ್ಥೆ ಈ ಮೊದಲೇ ತಿಳಿಸಿದಂತೆ ಆನ್​ಲೈನ್​ ತರಗತಿಗಳನ್ನು ನಡೆಸುವುದೇ ಸದ್ಯಕ್ಕಿರುವ ಪರಿಹಾರ. ಆ ಮೂಲಕ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿನ್ನಡೆಯಾಗದಂತೆ ನೋಡಿಕೊಳ್ಳಬೇಕಿದೆ. ಆದರೆ, ಕೆಲ ಸಂಸ್ಥೆಗಳು ಇದನ್ನೇ ನೆಪವಾಗಿಟ್ಟುಕೊಂಡು ಶಾಲಾ ಪ್ರವೇಶ ಶುಲ್ಕ ಹಾಗೂ ಇತರೆ ಶುಲ್ಕಗಳನ್ನು ಪಾವತಿಸುವಂತೆ ಪಾಲಕರನ್ನು ಒತ್ತಾಯಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಶಾಲೆಗಳು ಸರ್ಕಾರದ … Continue reading ಆನ್​ಲೈನ್​ ಪಾಠದ ಹೆಸರಲ್ಲಿ ಶುಲ್ಕ ವಸೂಲಿಗೆ ನಡೆಯುತ್ತಿದೆ ತಂತ್ರ, ಶಿಕ್ಷಣ ಸಂಸ್ಥೆಗಳಿಗೆ ಇಲಾಖೆ ನೀಡಿರುವ ಎಚ್ಚರಿಕೆ ಏನು?