More

    ವ್ಯಕ್ತಿತ್ವ ವಿಕಸನಕ್ಕೆ ಶಿಕ್ಷಣ ಅತ್ಯಗತ್ಯ

    ಸವಣೂರ: ಪ್ರತಿ ವಿದ್ಯಾರ್ಥಿ ವ್ಯಕ್ತಿತ್ವ ರೂಪಿಸಿ ವ್ಯಕ್ತಿತ್ವ ವಿಕಸನಗೊಳಿಸಲು ಶಿಕ್ಷಣ ಬಹಳ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

    ಪಟ್ಟಣದ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಶ್ರೀಮತಿ ಗಂಗಮ್ಮ ಎಸ್. ಬೊಮ್ಮಾಯಿ ಅವರ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಯಾರು ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಶಿಕ್ಷಣ ಸಂಸ್ಥೆ ನಿರ್ವಹಣೆ ಕಠಿಣವಾಗಿರುವ ಸಂದರ್ಭದಲ್ಲಿ ಉತ್ತಮ ಶಿಕ್ಷಕರ ತಂಡದೊಂದಿಗೆ ಸಂಸ್ಕಾರಯುತ ಮೌಲ್ಯದೊಂದಿಗೆ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು.

    ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಿವಾನಂದ ಬೋರಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ನಿಸ್ಸೀಮಗೌಡ್ರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎಂ. ಗಡೆಪ್ಪನವರ, ಬಿಜೆಪಿ ಸವಣೂರ ಮಂಡಳ ಅಧ್ಯಕ್ಷ ಗಂಗಾಧರ ಬಾಣದ, ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ಬಿ.ಎಂ. ಪಾಟೀಲ, ಪ್ರಮುಖರಾದ ಶ್ರೀಕಾಂತ ದುಂಡಿಗೌಡ್ರ, ಸುರೇಶ ಗಾಣಿಗೇರ, ಮುರಳಿಧರ ಶೆಂಡಗೆ, ಬಿಇಒ ಎಂ.ಎಫ್. ರ್ಬಾ, ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳಾದ ವಿನಾಯಕ ಹಿರೇಮಠ, ರಾಜಶೇಖರ ಗುರುಸ್ವಾಮಿಮಠ, ಶಿವಯೋಗಿ ಆರಾಧ್ಯಮಠ, ಪವಮಾನ ನಾವಾವಳಿ ಇತರರಿದ್ದರು. ಶಿಕ್ಷಕಿಯರಾದ ಜ್ಯೋತಿ ನಾಮಾವಳಿ, ಶ್ರೀದೇವಿ ನೀಲಣ್ಣನವರ ಕಾರ್ಯಕ್ರಮ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts