More

    ಶಿಕ್ಷಣ ಮಕ್ಕಳ ನಿಜವಾದ ಸಂಪತ್ತು

    ಎನ್.ಆರ್.ಪುರ: ಎಲ್ಲಾ ಭಾಷೆಗಳಿಗಿಂತ ಕನ್ನಡ ಭಾಷೆ ವಿಭಿನ್ನವಾಗಿದ್ದು, ಪ್ರಪಂಚದ ಲಿಪಿಗಳ ರಾಜ ಕನ್ನಡಕ್ಕೆ ತನ್ನದೇ ಆದ ಮಹತ್ವವಿದೆ ಎಂದು ಬಸ್ತಿಮಠದ ಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಸ್ವಾಮೀಜಿ ಹೇಳಿದರು.
    ಬಸ್ತಿಮಠದ ಶ್ರೀ ಜ್ವಾಮಾಲಿನಿ ದೇವಸ್ಥಾನದಲ್ಲಿ ಸೋಮವಾರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ, ನೈತಿಕ ಶಿಕ್ಷಣ ಯೋಜನೆ ಹಾಗೂ ಶಾಂತಿವನ ಟ್ರಸ್ಟ್ ಆಶ್ರದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮಕ್ಕಳಿಗೆ ನಡೆದ ತಾಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
    ಹಿಂದೆ ಗುರುಕುಲ ಪದ್ಧತಿಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ನೈತಿಕ ಶಿಕ್ಷಣ, ಸಂಸ್ಕಾರದ ಶಿಕ್ಷಣ ಕಲಿಸಲಾಗುತ್ತಿತ್ತು. ಮೌಲ್ಯಾಧಾರಿತ ಶಿಕ್ಷಣ ನೀಡುವುದು ಎಲ್ಲ ಶಿಕ್ಷಣ ಸಂಸ್ಥೆಗಳ ಮಹತ್ತರ ಜವಾಬ್ದಾರಿ. ಇಂದು ಶಿಕ್ಷಣ ವ್ಯಾಪಾರೀಕರಣವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಶಿಕ್ಷಣ ಮಕ್ಕಳ ಜೀವನಕ್ಕೆ ಬೇಕಾದ ನಿಜವಾದ ಸಂಪತ್ತು ಎಂದರು.
    ಶಾಂತಿವನ ಟ್ರಸ್ಟ್ ನಿರ್ದೇಶಕ ಶಶಿಕಾಂತ್ ಜೈನ್ ಮಾತನಾಡಿ, ಮಕ್ಕಳಿಗೆ ಕೇವಲ ಶಿಕ್ಷಣ ನೀಡುವುದು ಮುಖ್ಯವಲ್ಲ. ಉತ್ತಮ ಸಂಸ್ಕೃತಿ, ಸಂಸ್ಕಾರ ಕಲಿಸುವುದೂ ಮುಖ್ಯವಾಗುತ್ತದೆ. ಕದಿಯಲಾಗದ ನಿಜವಾದ ಸಂಪತ್ತು ಶಿಕ್ಷಣ. ಕೇವಲ ಶಿಕ್ಷಣ ಕಲಿತರೆ ಸಾಲದು, ಗುರು ಹಿರಿಯರನ್ನು, ಶಿಕ್ಷಕರನ್ನು ಗೌರವಿಸುವ, ಪೂಜಿಸುವ ಮನೋಭಾವ ರೂಢಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
    ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ, ಶ್ಲೋಕ ಹೇಳುವುದು, ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 60ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
    ಬಿಆರ್‌ಸಿ ಕೇಂದ್ರದ ಸಮನ್ವಯಾಧಿಕಾರಿ ಸೇವ್ಯಾನಾಯಕ್, ಬಿಆರ್‌ಪಿ ರಾಜಾನಾಯ್ಕ, ಶಿಕ್ಷಕಿ ನೇತ್ರಾವತಿ,ತಿಮ್ಮೇಶ್, ಆರ್.ನಾಗರಾಜ್, ಎನ್.ಪಿ.ದೀಪಕ್ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts