More

    ದ್ವಿತೀಯ ಪಿಯುಸಿ, ಎಸ್​​​ಎಸ್​​ಎಲ್​​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದಲ್ಲಿ ಇಂದು ಪ್ರಕಟಿಸಲಾಗಿದೆ.

    2024 ಮಾರ್ಚ್​ 02ರಿಂದ ಮಾರ್ಚ್​ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇನ್ನು ಮಾರ್ಚ್​ 25 ರಿಂದ ಏಪ್ರಿಲ್​​ 06 ರವರೆಗೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಂಡಲಿ ಮೂರು ತಿಂಗಳ ಮುಂಚಿತವಾಗಿಯೇ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ.

    ಮಂಡಲಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್‌ 15ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ.

    ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ: [email protected]ಕ್ಕೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

    ಎಸ್​​ಎಸ್​​ಎಲ್​​​ಸಿ ವೇಳಾಪಟ್ಟಿಗಾಗಿ ಈ ಲಿಂಕ್ ಕ್ಲಿಕ್​​ ಮಾಡಿ 

    ದ್ವಿತೀಯ ಪಿಯುಸಿ ವೇಳಾಪಟ್ಟಿಗಾಗಿ ಈ ಲಿಂಕ್​​ ಕ್ಲಿಕ್ ಮಾಡಿ 

    ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ, ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚುತ್ತೇವೆ: ಸಿಎಂ ಸಿದ್ದರಾಮಯ್ಯ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts