More

    ಶಾಲಾ ಸಮವಸ್ತ್ರದ ಬಗ್ಗೆ ಶಿಕ್ಷಣ ಸಚಿವರಿಂದ ಸ್ಪಷ್ಟನೆ!; ಇಲ್ಲಿದೆ ವಿವರ….

    ಬೆಂಗಳೂರು: ಹಿಜಾಬ್ ವಿವಾದ ಹೈಕೋರ್ಟ್​ ಮೆಟ್ಟಿಲೇರಿದ್ದು, ಏನು ತೀರ್ಪು ಬರಬಹುದು ಎಂದು ಅದರ ಕುರಿತಾಗಿದ್ದ ಕುತೂಹಲ ನಿನ್ನೆ ತಣಿಯದಿದ್ದರೂ, ಇಂದಾದರೂ ತಣಿದೀತು ಎಂಬ ನಿರೀಕ್ಷೆ ಇವತ್ತೂ ನಿರೀಕ್ಷೆಯಾಗಿಯೇ ಉಳಿಯಿತು.

    ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ, ಪ್ರಕರಣದ ಮಹತ್ವ ಹಾಗೂ ಸೂಕ್ಷ್ಮತೆ ಪರಿಗಣಿಸಿ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

    ಸರ್ಕಾರದ ವಾದಕ್ಕೆ ಧ್ವನಿಗೂಡಿಸಿದ ಹಿರಿಯ ವಕೀಲ ಸಜನ್ ಪೂವಯ್ಯ, ಯಾವುದೇ ಕಾರಣಕ್ಕೂ ಮಧ್ಯಂತರ ಆದೇಶ ನೀಡಬಾರದು. ಸಮವಸ್ತ್ರದ ಬಗ್ಗೆ ನಿಯಮ ರೂಪಿಸಲಾಗಿದೆ. ಪ್ರತಿ ವರ್ಷವೂ ಕಾಲೇಜಿನಲ್ಲಿ ಸಮವಸ್ತ್ರ ಇರುತ್ತದೆ. ಪ್ರತಿಯೊಬ್ಬರೊಂದಿಗೂ ಚರ್ಚಿಸಿಯೇ ಸಮವಸ್ತ್ರ ರೂಪಿಸಲಾಗಿದೆ. ಇಷ್ಟು ದಿನ ಆ ಸಮವಸ್ತ್ರವನ್ನು ಅರ್ಜಿದಾರರೂ ಧರಿಸಿದ್ದಾರೆ. ಈಗ ಏಕಾಏಕಿ ತಕರಾರು ತೆಗೆದಿದ್ದಾರೆ. ಯಾವುದೇ ಕಾರಣಕ್ಕೂ ಮಧ್ಯಂತರ ಆದೇಶ ನೀಡಬಾರದು ಎಂದರು.

    ಸರ್ಕಾರ ಅರ್ಜಿದಾರರ ಹಕ್ಕುಗಳನ್ನು ನಿಯಂತ್ರಿಸುವಂಥ ಆದೇಶ ಹೊರಡಿಸಿಲ್ಲ ಎನ್ನುತ್ತಿದೆ. ಹಾಗಿದ್ದರೆ ಅರ್ಜಿದಾರರಿಗೆ ಕಾಲೇಜುಗಳಿಗೆ ತೆರಳಲು ಯಾವುದೇ ನಿರ್ಬಂಧ ವಿಧಿಸಬಾರದು ಎಂದು ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಹೇಳಿದರು. ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾಯಿಸುವರೆಗೆ ಮಧ್ಯಂತರ ಆದೇಶ ನೀಡಿ. ಕಾಲೇಜಿಗೆ ಪ್ರವೇಶ ಕಲ್ಪಿಸಲು ಮಧ್ಯಂತರ ಆದೇಶ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು.

    ವಾದ-ವಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.​ ದೀಕ್ಷಿತ್​ ಅವರಿದ್ದ ಏಕಸದಸ್ಯ ಪೀಠ, ಪ್ರಕರಣ ಸೂಕ್ಷ್ಮವಾದ ಕಾರಣ ವಿಸ್ತೃತ ಪೀಠದಲ್ಲಿಯೇ ವಿಚಾರಣೆ ನಡೆಯಬೇಕು. ಇದಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಕರಣದ ದಾಖಲೆ ಹಾಗೂ ಕಡತಗಳನ್ನು ಶೀಘ್ರವೇ ವರ್ಗಾಯಿಸಿ ಎಂದು ರಿಜಿಸ್ಟ್ರಿಗೆ ಸೂಚಿಸಿತು. ವಿಸ್ತೃತ ಪೀಠ ರಚನೆ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸಲಿ ಎಂದರು. ವಾದ-ವಿವಾದ ಆಲಿಸಿದ ನ್ಯಾಯಮೂರ್ತಿಗಳು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದರು.

    ಈ ಎಲ್ಲ ಬೆಳವಣಿಗೆಗಳ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಸಮವಸ್ತ್ರ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. ನ್ಯಾಯಾಲಯ ಸದ್ಯ ಯಾವುದೇ ಮಧ್ಯಂತರ ಆದೇಶ ನೀಡದ್ದರಿಂದ ಸಮವಸ್ತ್ರ ಕುರಿತ ಸರ್ಕಾರದ ಆದೇಶ ಅಬಾಧಿತವಾಗಿರುತ್ತದೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಲು ಸಮವಸ್ತ್ರ ಕಡ್ಡಾಯ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

    ಹಿಜಾಬ್​ ಕಿಚ್ಚು ಹೊತ್ತಿಸಿದವರ ಶಕ್ತಿಪ್ರದರ್ಶನ: ಅದೇ ಆರು ವಿದ್ಯಾರ್ಥಿನಿಯರಿಂದ ಮತ್ತೆ ತಕರಾರು

    ಏನನ್ನು ಬೇಕಾದರೂ ಧರಿಸಿ, ಆದರೆ…: ಹಿಜಾಬ್​ ವಿವಾದ ಕುರಿತಂತೆ ಹೀಗಂದ್ರು ನಟಿ ಹೇಮಾಮಾಲಿನಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts