More

    ಗ್ಯಾರಂಟಿ ಯೋಜನೆ ಕೊಟ್ಟಿರುವುದು ಶೋಕಿಗಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

    ಶಿವಮೊಗ್ಗ: ಜಿಎಸ್ಟಿ, ಗ್ಯಾಸ್, ಬೆಲೆ ಏರಿಕೆ ಹೇಳಿಕೊಂಡೇ ನಾವು ಗೆದ್ದಿರುವುದು. ಗ್ಯಾರಂಟಿ ಯೋಜನೆ ಕೊಟ್ಟಿರುವುದು ಶೋಕಿಗಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

    ಸೊರಬದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಎಸ್ಟಿ, ಗ್ಯಾಸ್, ಬೆಲೆ ಏರಿಕೆ ಹೇಳಿಕೊಂಡೇ ನಾವು ಗೆದ್ದಿರುವುದು. ಅದಕ್ಕೆ ಪರಿಹಾರಾರ್ಥವೇ ಈ ಗ್ಯಾರಂಟಿ ಕಾರ್ಡ್ ಆಗಿದೆ. ರಾಜ್ಯಮಟ್ಟದಲ್ಲಿ ರೆವಿನ್ಯೂ ಬರುವುದರಿಂದ ಗ್ಯಾರಂಟಿ ಯೋಜನೆ ಯಶಸ್ವಿ ಆಗುತ್ತದೆ. ಸೊರಬ ಭಾಗದಲ್ಲಿ ಕೃಷಿ ಜಮೀನು ಅಕ್ರಮ ಸಕ್ರಮ (ಬಗರ್ ಹುಕುಂ) ಬಹು ದೊಡ್ಡ ಸಮಸ್ಯೆ ಆಗಿದೆ. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿ ಮನೆ ಕಟ್ಟಿಕೊಂಡವರ ರಕ್ಷಣೆ ಆಗಬೇಕಿದೆ. ಕೇಂದ್ರದ ಸಹಕಾರ ಪಡೆದು ಅದನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: ಭಾರತದ ಮೊದಲ ಮಹಿಳಾ ಗಗನಯಾತ್ರಿ ಕಲ್ಪನಾ ಚಾವ್ಲಾ ಬಯೋಪಿಕ್​​​ನಲ್ಲಿ ಶ್ರದ್ಧಾ ಕಪೂರ್ !

    ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅದ್ಭುತ ಕೆಲಸ ಮಾಡಿದ್ದರು. ಬೇರೆ ಸರ್ಕಾರ ಬಂದ ನಂತರ ಅದೆಲ್ಲ ಹಾಳಾಗಿತ್ತು. ಈಗ ಅಧಿಕಾರಿ ವರ್ಗದ ಜೊತೆ ಮಾತಾಡಿದ್ದೇವೆ. ಅರಣ್ಯ ಸಚಿವರಿಗೆ ವಿನಂತಿ ಮಾಡಿದ್ದೇವೆ. ಇಲ್ಲಿನ ಸಮಸ್ಯೆ ತ್ವರಿತವಾಗಿ ಇತ್ಯರ್ಥ ಮಾಡುತ್ತೇವೆ ಎಂದಿದ್ದಾರೆ.

    ಏತ ನೀರಾವರಿ ಯೋಜನೆ ಉದ್ಘಾಟನೆ ಆಗಿಲ್ಲ. ಆಗಿದ್ದರೆ ಈ ಬೇಸಿಗೆಗೆ ಸಮಸ್ಯೆ ಆಗುತ್ತಿರಲಿಲ್ಲ. ಕೆರೆಕಟ್ಟೆಗಳು ಬತ್ತಿ ಹೋಗಿವೆ ಎಂದಿದ್ದಾರೆ. ಸಂಜೆ ಅಧಿಕಾರಿಗಳ ಪರಿಶೀಲನಾ ಸಭೆ ಇಟ್ಟು ಕೊಂಡಿದ್ದೇನೆ. ಅದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಮೊದಲ ರಾತ್ರಿಯಂದೇ ಹೃದಯಾಘಾತದಿಂದ ನವದಂಪತಿ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts