More

    ಶಾಲಾ-ಕಾಲೇಜು ಆರಂಭ, ಆನ್​ಲೈನ್​ ತರಗತಿ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​

    ಬೆಂಗಳೂರು: ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್‍ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಎಂಬುದನ್ನು ಮತ್ತೊಮ್ಮೆ ಸಚಿವ ಸುರೇಶ್ ಕುಮಾರ್‌ ಸ್ಪಷ್ಟ ಪಡಿಸಿದ್ದಾರೆ.

    ಇದನ್ನೂ ಓದಿ: ಸತ್ತಿದ್ದು ಡಿಸೆಂಬರ್‌ನಲ್ಲಿ ಮೃತದೇಹ ಬಂದಿದ್ದು ಈಗ: ಕೆಲಸಕ್ಕೆಂದು ಮಲೇಷ್ಯಾಗೆ ಹೋಗಿ ಶವವಾದ ಯುವಕ!

    ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆಎಂದಿರುವ ಸಚಿವರು ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಪೋಲ ಕಲ್ಪಿತ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

    ಸರ್ಕಾರ ತಾನಾಗಿಯೇ ಯಾವುದೇ ನಿರ್ಣಯ ಅಧಿಕೃತವಾಗಿ ಪ್ರಕಟಿಸುವ ಮುನ್ನ ಮಾಧ್ಯಮದಲ್ಲಿ ಪ್ರಸಾರವಾಗುವ ಅಥವಾ ಪ್ರಕಟವಾಗುವ ಯಾವುದೇ ಸುದ್ದಿಯನ್ನು ನಿಜ ಎಂದು ನಂಬಬೇಡಿ ಎಂದೂ ಅವರು ಕೋರಿದ್ದಾರೆ.

    ಇದನ್ನೂ ಓದಿ: ಕಾನ್ಪುರ ಪೊಲೀಸರ​ ಹತ್ಯೆ ಪ್ರಕರಣ: ಆರೋಪಿ​ ವಿಕಾಸ್​ ದುಬೆ ಆಪ್ತ ಅಮರ್​ ದುಬೆ ಎನ್​ಕೌಂಟರ್​ನಲ್ಲಿ ಫಿನಿಶ್​

    ತಜ್ಞರ ಸಮಿತಿ ವರದಿ ಅಥವಾ ಬೇರೆ ಬೇರೆ ಆಯಾಮಗಳಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ಚರ್ಚೆಗಳು ಎಂದಿಗೂ ಅಂತಿಮ ನಿರ್ಣಯವಾಗಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.

    ಪಡ್ಡೆ ಹುಡುಗ್ರು ಬ್ಲೂಫಿಲ್ಮ್​ಗೆ ಕಾದು ಕೊನೆಗೆ ಏನಿಲ್ಲ ಎಂಬತಾಯಿತು: ಉಪ್ಪಿ ಫ್ಯಾನ್ಸ್​ ಕಾಲೆಳೆದ ಅನುಪಮಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts