More

    ಶಿಕ್ಷಣ ಕ್ಷೇತ್ರದಲ್ಲಿ ಜಗಳೂರು ಮುಂದೆ : ಶಾಸಕ ಎಸ್.ವಿ.ರಾಮಚಂದ್ರ ಹೇಳಿಕೆ

    ಜಗಳೂರು: ತಾಲೂಕು ಆರ್ಥಿಕವಾಗಿ ಹಿಂದುಳಿದಿರಬಹುದು. ಆದರೆ ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದೆ ಬಿದ್ದಿಲ್ಲ. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎ ಗ್ರೇಡ್ ಪಡೆದುಕೊಂಡು ಗೌರವ ತಂದಿದೆ ಎಂದು ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ ಹೇಳಿದರು.

    ಇಲ್ಲಿನ ವಾಲ್ಮೀಕಿ ಭವನದಲ್ಲಿ ಶನಿವಾರ ಚಲವಾದಿ ಸಮಾಜದ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಮೂರು ಬಾರಿ ಶಾಸಕನಾಗಿ ಆಯ್ಕೆ ಮಾಡಿದ ಕ್ಷೇತ್ರದ ಮತದಾರರ ಋಣ ತೀರಿಸುವುದು ನನ್ನ ಕರ್ತವ್ಯ. ನನಗೆ ಯಾವ ಮಂತ್ರಿ ಸ್ಥಾನವೂ ಬೇಕಾಗಿಲ್ಲ. ಕೆರೆಗಳಿಗೆ ನೀರು ತುಂಬಿಸುವುದೇ ನನ್ನ ಕನಸಾಗಿತ್ತು. ಈಗ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

    ಚಲವಾದಿ ಸಮಾಜಕ್ಕೆ ಅಗತ್ಯ ನಿವೇಶನ ಹಾಗೂ ಸಮುದಾಯ ಭವನ ನಿರ್ಮಿಸಿಕೊಡಲಾಗುವುದು. ಸಮಾಜದ ಅಭಿವೃದ್ಧಿಗೆ ಸದಾ ಸಿದ್ಧನಿದ್ದೇನೆ ಎಂದರು.

    ಜಿಪಂ ಮಾಜಿ ಸದಸ್ಯ ಸಿ.ಲಕ್ಷ್ಮಣ್ ಮಾತನಾಡಿ, ಸಮಾಜ ಒಡೆಯುವುದು ಸುಲಭ. ಆದರೆ ಅದನ್ನು ಒಗ್ಗೂಡಿಸಿ ಸಂಘಟನೆ ಮಾಡುವುದು ದೊಡ್ಡ ಸವಾಲು. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಆಗ ಸಮಾಜ ನಮ್ಮನ್ನು ಗೌರವಿಸುತ್ತದೆ ಎಂದರು.

    ಸಮಾಜ ಕಲ್ಯಾಣ ಇಲಾಖಾಧಿಕಾರಿ ಮಹೇಶ್, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ರುದ್ರಮುನಿಯಪ್ಪ, ನಿವೃತ್ತ ವೈದ್ಯಾಧಿಕಾರಿ ಜಗನಾಥ್, ನಿವೃತ್ತ ಅಧಿಕಾರಿ ಸಿ. ತಿಪ್ಪೇಸ್ವಾಮಿ, ಸಮಾಜದ ಅಧ್ಯಕ್ಷ ನಿಜಲಿಂಗಪ್ಪ, ಬ್ಯಾಂಕ್ ವ್ಯವಸ್ಥಾಪಕ ಶಿವಾನಂದ, ಉಮಾಶಂಕರ್, ನಿವೃತ್ತ ಸೈನಿಕ ಶೇಖರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts