ದಿಲೀಪ್ ಕುಮಾರ್‌ಗೆ ಶಿಕ್ಷಣ ಸೌರಭ ಪ್ರಶಸ್ತಿ

New Project (8)
Published on

ಕಡಬ: ಓಂತ್ರಡ್ಕ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಆಂಗ್ಲ ಭಾಷಾ ಪದವೀಧರ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶೈಕ್ಷಣಿಕ ಚಿಂತಕ, ಕಥೆಗಾರ ದಿಲೀಪ್ ಕುಮಾರ್ ಸಂಪಡ್ಕ ಹೂವಿನ ಹಡಗಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ನೀಡುವ ರಾಷ್ಟ್ರೀಯ ಶಿಕ್ಷಣ ಸೌರಭ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ದಿಲೀಪ್ ಕುಮಾರ್ ಅವರ ಶಿಕ್ಷಣ, ಸಂಘಟನೆ, ಸಮಾಜ ಸೇವೆ ಪರಿಗಣಿಸಿ ಭಾನುವಾರ ಶಿವಮೊಗ್ಗದ ಕರ್ನಾಟಕ ಸಂಘ ಸಭಾಭವನದಲ್ಲಿ ನಡೆದ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಹೂವಿನ ಹಡಗಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಅಧ್ಯಕ್ಷ ಮುಧುನಾಯ್ಕ ಲಂಬಾಣಿ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಹಿಂದೆ ಇವರಿಗೆ ಕನ್ನಡ ರಕ್ಷಣಾ ವೇದಿಕೆ ರಾಜ್ಯಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಕರೊನ ಕಾಲದ ಮಾತು ಮಂಥನ ಎಂಬ ಕೃತಿ ಪ್ರಕಟಗೊಂಡಿದೆ. ರಾಜ್ಯ, ಜಿಲ್ಲೆಯ ಹಲವು ಸಂಘ, ಸಂಸ್ಥೆ ಸೇರಿದಂತೆ ಶಿಕ್ಷಕರು, ಸಂಘಟನೆ ಇವರನ್ನು ಅಭಿನಂದಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net