More

    ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ಯತ್ನ

    ರಾಮದುರ್ಗ: ಪ್ರಸಕ್ತ ಅವಧಿಯಲ್ಲಿ ತಾಲೂಕಿನ ಸುಮಾರು 500 ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಮಂಜೂರು ಮಾಡಿದ್ದು, ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದ್ದಾರೆ.

    ತಾಲೂಕಿನ ರಂಕಲಕೊಪ್ಪ ಗ್ರಾಮದಲ್ಲಿ 15 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಕಟ್ಟಡ, ಹಾಲೊಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 22 ಲಕ್ಷ ರೂ. ವೆಚ್ಚದಲ್ಲಿ ಎರಡು ಕೊಠಡಿ, ಬಂಡೆಮ್ಮನಗರ ಕಿರಿಯ ಪ್ರಾಥಮಿಕ ಶಾಲೆಗೆ 22 ಲಕ್ಷ ರೂ. ವೆಚ್ಚದಲ್ಲಿ ಎರಡು ಕೊಠಡಿಗಳ
    ನಿರ್ಮಾಣ ಹಾಗೂ ಚಿಲಮೂರ ಹಿರಿಯ ಪ್ರಾಥಮಿಕ ಶಾಲೆಗೆ ನೂತನವಾಗಿ ನಿರ್ಮಿಸಲಾದ 3 ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಚಿಲಮೂರ ಗ್ರಾಮಸ್ಥರು ರಸ್ತೆ, ಸುಧಾರಣೆ, ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಗ್ರಾಮಸ್ಥರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಿ, ಕ್ಷೇತ್ರದ ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ಹಗಲಿರುಳು ಶ್ರಮಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

    ಮಾಜಿ ಜಿಪಂ ಅಧ್ಯಕ್ಷೆ ಮಹಾದೇವಿ ರೊಟ್ಟಿ ಮಾತನಾಡಿ, ವ್ಯಕ್ತಿಯ ಯಶಸ್ಸಿನಲ್ಲಿ ಶಿಕ್ಷಣದ ಪ್ರಾಮುಖ್ಯತೆ ಅಲ್ಲಗಳೆಯುವಂತಿಲ್ಲ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಕಡೆಗೆ ಗಮನ ಹರಿಸಿ ಸತತ ಪ್ರಯತ್ನಶೀಲರಾಗಿ ಅಧ್ಯಯನ ನಡೆಸುವ ಮೂಲಕ ಕಲಿತ ಶಾಲೆ ಹಾಗೂ ಗ್ರಾಮದ ಕೀರ್ತಿ ಹೆಚ್ಚಿಸಬೇಕೆಂದು ಕರೆ ನೀಡಿದರು.

    ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡ ನಾಮದೇವ ಕಲ್ಲೇಶನವರ, ಶಾಲಾ ಕಂಪೌಂಡ್ ನಿರ್ಮಾಣ, ಕುಡಿಯುವ ನೀರು, ಶಾಲೆಗೆ ಆಗಮಿಸಲು
    ರಸ್ತೆ ಸುಧಾರಣೆ ಸೇರಿದಂತೆ ಗ್ರಾಮದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಫಕೀರಪ್ಪ ಮಾಯಣ್ಣವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಅಲಾಸೆ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಬಿಜೆಪಿ ಮುಖಂಡ ಬಿ.ಎಫ್.ಬಸಿಡೋಣಿ, ನಿಂಗಪ್ಪ ಗುದಗಿ, ಲೋಕೋಪಯೋಗಿ ಎಇಇ ಆರ್.ಝಡ್.ಸೊಲ್ಲಾಪುರ, ಶಿಕ್ಷಕರಾದ ಎಂ.ಎಸ್.ಗಡೇಕಾರ, ಆರ್.ಪಿ.ತುರುಮರಿ, ಆರ್.ಎಫ್.ಸಣ್ಣಪ್ಪನವರ, ಎಂ.ಬಿ.ಗಳಗನಾಥ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts