More

    ವಿದ್ಯಾಭಾರತಿಯಿಂದ ಶೈಕ್ಷಣಿಕ ಸಹ ಮಿಲನ ಕಾರ್ಯಕ್ರಮ

    ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲೆ ವತಿಯಿಂದ ಮಂಗಳೂರು ವಲಯದ ಶೈಕ್ಷಣಿಕ ಸಹ ಮಿಲನ ಕಾರ್ಯಕ್ರಮ ತಲಪಾಡಿ ಶಾರದಾ ಪಬ್ಲಿಕ್ ಶಾಲೆ ಆಡಿಟೋರಿಯಂನಲ್ಲಿ ನಡೆಯಿತು.

    ಕಾರ್ಯಕ್ರಮ ಉದ್ಘಾಟಿಸಿದ ಶಕ್ತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ.ಕೆ.ಸಿ.ನಾಕ್ ಮಾತನಾಡಿ, ಶಿಕ್ಷಕರಿಗೆ ಸಮಾಜದಲ್ಲಿ ಗೌರವದ ಸ್ಥಾನವಿದೆ. ಗುರುವಿಗೆ ಮಾತ್ರ ಒಬ್ಬ ವಿದ್ಯಾರ್ಥಿಯನ್ನು ದೇಶದ ಸಂಪತ್ತಾಗಿ ರೂಪಿಸಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವ ನಿರ್ಮಾಣ ಮಾಡುವ ಗುರಿಯನ್ನು ಶಿಕ್ಷಕರು ಹೊಂದಿರಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಶಾರದಾ ಸಮೂಹ ಸಂಸ್ಥೆ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಮಾತನಾಡಿ, ಶಿಕ್ಷಕ ವೃತ್ತಿಯ ಬಗ್ಗೆ ಕೀಳರಿಮೆ ಇರಬಾರದು. ನಾವು ಶಿಕ್ಷಣ ಸಂಸ್ಥೆಯನ್ನು ಪ್ರೀತಿಸಬೇಕು. ಆಗ ಮಾತ್ರ ಸಾಧನೆ ಸಾಧ್ಯ. ಶಿಕ್ಷಕ ವೃತ್ತಿಗೆ ಗೌರವ ತಂದುಕೊಳ್ಳುವುದು ನಮ್ಮ ಕೈಯಲ್ಲಿದೆ. ಅಂತಹ ಕಾರ್ಯ ವಿದ್ಯಾಭಾರತಿಯಂತಹ ರಾಷ್ಟ್ರೀಯ ವಿಚಾರದಿಂದ ಸಾಧ್ಯವಿದೆ ಎಂದರು.

    ಸಂಸ್ಥೆ ನಿರ್ದೇಶಕ ಸಮೀರ್ ಪುರಾಣಿಕ್ ಉಪಸ್ಥಿತರಿದ್ದರು. ವಿದ್ಯಾಭಾರತಿ ದ.ಕ. ಜಿಲ್ಲಾಧ್ಯಕ್ಷ ಲೋಕಯ್ಯ ಡಿ. ಸ್ವಾಗತಿಸಿ, ರಮೇಶ್ ಕೆ. ವಂದಿಸಿದರು. ದಯಾನಂದ ಕಟೀಲು ಕಾರ್ಯಕ್ರಮ ನಿರೂಪಿಸಿದರು.

    ಸನ್ಮಾನ, ವಿದ್ಯಾರ್ಥಿಗಳಿಗೆ ಗೌರವ

    ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪಡೆದ ಎಂ.ಬಿ. ಪುರಾಣಿಕ್ ಅವರನ್ನು ವಿದ್ಯಾಭಾರತಿ ವತಿಯಿಂದ ಸನ್ಮಾನಿಸಲಾಯಿತು. ಶಾಲೆ ಮತ್ತು ಪಪೂ ಕಾಲೇಜಿನಲ್ಲಿ ಅತೀ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿದ್ಯಾಭಾರತಿ ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಕೇಂದ್ರ ಸರ್ಕಾರದ ಎಸ್‌ಜಿಎಫ್‌ಐ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts