ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ ಎಂದು ಡಿಸಿಎಂ DK ಶಿವಕುಮಾರ್ ಕಿವಿಮಾತು ಹೇಳಿದರು.

ಮಳವಳ್ಳಿಯಲ್ಲಿ ಶಾಲಾ ಕಟ್ಟಡ ಹಾಗೂ ಸಾಯಿಬಾಬಾ ಮಂದಿರವನ್ನು ಭಾನುವಾರದಂದು ಲೋಕಾರ್ಪಣೆ ಮಾಡಿ ಡಿಸಿಎಂ ಮಾತನಾಡಿದರು.
ಇದನ್ನೂ ಓದಿ:ಬೆಂಗಳೂರು ನಗರ ವಿ.ವಿ.ಗೆ ಮನಮೋಹನ್ ಸಿಂಗ್ ಹೆಸರು: ಜೆಡಿಎಸ್ ವಿರೋಧ|JDS Oposes
“ದಳ, ಬಿಜೆಪಿ,ಕಾಂಗ್ರೆಸ್, ರೈತ ಸಂಘ – ಹೀಗೆ ಯಾವುದೇ ಪಕ್ಷದ ರಾಜಕಾರಣಿಗಳನ್ನು ನಿಮ್ಮ ಶಿಕ್ಷಣ ಸಂಸ್ಥೆಯ ಒಳಗೆ ಸೇರಿಸಬೇಡಿ. ಶಾಲಾ ಶುಲ್ಕ ಕಡಿಮೆ ಮಾಡಿ ಎನ್ನುವ ಶಿಫಾರಸ್ಸು ತರುವುದರಿಂದ ಶಾಲೆಗಳನ್ನು ನಡೆಸಲು ಆಗುವುದಿಲ್ಲ. ಪೋಷಕರು ಸಹಕರಿಸಿದರೆ ಮಾತ್ರ ಸಂಸ್ಥೆ ಬೆಳೆಯುತ್ತದೆ. ಇಲ್ಲದಿದ್ದರೆ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದರು.
ಇದನ್ನೂ ಓದಿ:ಭಾರತದ ಅತಿದೊಡ್ಡ ರೀಟ್ ಐಪಿಒ : 6200 ಕೋಟಿ ರೂ ಮೊತ್ತದ ಐಪಿಒಗೆ ಸತ್ವ ಡೆವೆಲೊಪರ್ಸ್ ಸಜ್ಜು
ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಲಾಗುವುದು. ಸಿಎಸ್ ಆರ್ ಹಣ ಬಳಸಿ ಈಗಾಗಲೇ ರಾಜ್ಯದಲ್ಲಿ 30 ಶಾಲೆಗಳ ಕಾರ್ಯಾರಂಭ ಮಾಡಲಾಗಿದೆ. ನನ್ನ ಕ್ಷೇತ್ರದಲ್ಲಿ ಟೊಯೋಟೊ, ಪ್ರೆಸ್ಟೀಜ್ ಕಂಪೆನಿಗಳ ಸಹಯೋಗದಲ್ಲಿ 5-6 ಕೆಪಿಎಸ್ ಶಾಲೆಗಳಿಗೆ ಶಂಕುಸ್ಥಾಪನೆ ಮಾಡಿದ್ದೇನೆ. ಇಡೀ ರಾಜ್ಯದಾದ್ಯಂತ 2 ಸಾವಿರ ಶಾಲೆಗಳ ನಿರ್ಮಾಣ ಮಾಡುವುದು ನಮ್ಮ ಗುರಿ ಎಂದರು.
ಹೋಳಿ ಹಬ್ಬದಂದು ನಮಾಜ್ ಮಾಡಲು ಬಯಸಿದರೆ ಮನೆಯಲ್ಲಿಯೇ ಪ್ರಾರ್ಥಿಸಿ; ಸಿಎಂ ಯೋಗಿ ಆದಿತ್ಯನಾಥ್ ಹೀಗೆಳಿದ್ದೇಕೆ? | Holi
Champions Tropy ಯಲ್ಲಿ ಫೈನಲ್ ಪಂದ್ಯ ಆಡುವ ಮೂಲಕ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ!; ಏನದು ರನ್ ಮಷಿನ್ ಸಾಧನೆ?