More

    ಸಹಕಾರಿ ಬ್ಯಾಂಕ್‌ಗಳು ಜನರ ಜೀವನಾಡಿ

    ಬೀಳಗಿ: ಸಹಕಾರಿ ಕ್ಷೇತ್ರದ ಬ್ಯಾಂಕ್‌ಗಳು ಆರ್ಥಿಕವಾಗಿ ಹಿಂದುಳಿದ ಸಮಾಜದ ಕಟ್ಟಕಡೆಯ ವ್ಯಕ್ತಿಗೆ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಸ್ಥರಿಗೆ ಮತ್ತು ರೈತರಿಗೆ ಸಕಾಲದಲ್ಲಿ ಸಾಲದ ನೆರವು ನೀಡುತ್ತ ಜನಸಾಮಾನ್ಯರ ಜೀವನಾಡಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಬ್ಯಾಂಕ್ ನಿರ್ದೇಶಕ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಎಂ.ಎನ್.ಪಾಟೀಲ ಹೇಳಿದರು.

    ಸ್ಥಳೀಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್‌ನ ಪ್ರಧಾನ ಕಚೇರಿಯ ಆವರಣದಲ್ಲಿ ಭಾನುವಾರ ಬ್ಯಾಂಕ್‌ನ 23ನೇ ವಾರ್ಷಿಕ ಮಹಾಸಭೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

    ಕೇವಲ 11 ಲಕ್ಷ ರೂ. ಷೇರು ಬಂಡವಾಳದಿಂದ 1997ರಲ್ಲಿ ಪ್ರಾರಂಭವಾದ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ಇಂದು 463 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿದೆ. ಬ್ಯಾಂಕ್ 1 ಕೋಟಿ 76 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಇದಕ್ಕೆ ಸಂಸ್ಥೆಯ ಅಧ್ಯಕ್ಷರ ಮೇಲಿನ ವಿಶ್ವಾಸ ಹಾಗೂ ಗ್ರಾಹಕರು, ಠೇವಣಿದಾರ ಸಹಕಾರದಿಂದ ಬ್ಯಾಂಕ್ ಪ್ರಗತಿಯುತ್ತ ದಾಪುಗಾಲು ಹಾಕುತ್ತಿದೆ. ನಿಗದಿತ ಅವಧಿಯಲ್ಲಿ ಸಾಲ ಪಡೆದ ಸಾಲಗಾರರು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿ ಬ್ಯಾಂಕ್ ಶ್ರಯೋಭಿವೃದ್ಧಿಗೆ ಮುಂದಾಗಬೇಕು ಎಂದರು.

    ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಎಲ್.ಬಿ.ಕುರ್ತಕೋಟಿ ಮಾತನಾಡಿ, ಸಂಘದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರ ಪರಿಶ್ರಮ ಹಾಗೂ ಆಡಳಿತ ಮಂಡಳಿಯ ಸಹಕಾರ ಮತ್ತು ಸಿಬ್ಬಂದಿ ವರ್ಗದವರ ಕಾರ್ಯ ನಿಷ್ಠೆಯಿಂದ ಗ್ರಾಹಕರು ಹೆಚ್ಚು ವಿಶ್ವಾಸ ಇಟ್ಟಿದ್ದರಿಂದ ಇಂದು ಬಾಗಲಕೋಟೆ ಜಿಲ್ಲೆಯಲ್ಲಷ್ಟೆ ಅಲ್ಲದೆ, ವಿಜಯಪುರ, ಬೆಳಗಾವಿ, ರಾಯಚೂರು, ಕೊಪ್ಪಳ, ಗದಗ ಜಿಲ್ಲೆಗಳಿಗೆ ತನ್ನ ಕಾರ್ಯಕ್ಷೇತ್ರ ವಿಸ್ತರಿಸಿಕೊಂಡಿದೆ ಎಂದರು.
    ಬ್ಯಾಂಕ್ ಉಪಾಧ್ಯಕ್ಷ ಸತ್ಯಪ್ಪ ಮೇಲ್ನಾಡ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ಕೆ.ಎಸ್.ಪತ್ರಿ, ಎಚ್.ಎ.ಕೊಪ್ಪಳ, ಡಿ.ಬಿ.ಮಮದಾಪುರ, ಎಸ್.ಕೆ.ಯಡಹಳ್ಳಿ, ಆಡಳಿತಾಧಿಕಾರಿ ಐ.ವಿ.ಬಸರಕೋಡ, ಬಿ.ಎನ್.ಮುಕಾಶಿ, ಉಪ ಪ್ರಧಾನ ವ್ಯವಸ್ಥಾಪಕ ಜಿ.ಎಸ್.ಬನ್ನಟ್ಟಿ ಹಾಗೂ ಅನೇಕರು ಪಾಲ್ಗೊಂಡಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts