More

    ಶಿಕ್ಷಕರು ಮಕ್ಕಳಿಗೆ ನಮ್ಮ ಸಂಸ್ಕೃತಿ ತಿಳಿಸಲಿ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ:ಭಾರತದ ಮೇಲೆ ಅಕ್ರಮಣ ಮಾಡಿದವರನ್ನೇ ಗ್ರೇಟ್ ಎಂದು ಬಣ್ಣಿಸುವ ಪಠ್ಯಗಳನ್ನು ಇಷ್ಟು ವರ್ಷ ಬೋಧಿಸಿದ್ದಾಗಿದೆ. ಇನ್ನು ಮುಂದೆ ನಮ್ಮ ಸಂಸ್ಕೃತಿಯನ್ನು ಬಿಂಭಿಸುವ, ಸ್ವಾತಂತ್ರೃ ಹೋರಾಟಗಾರರನ್ನು ಮಕ್ಕಳಿಗೆ ಪರಿಚಯಿಸುವ ಕೆಲಸವಾಗಬೇಕೆಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
    ಜಿಲ್ಲಾಡಳಿತದಿಂದ ಸೋಮವಾರ ನಗರದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಕರು ಭವಿಷ್ಯವನ್ನು ಸೃಷ್ಠಿಸುವ ಶಿಲ್ಪಿಗಳು. ಅವರು ಮಕ್ಕಳಲ್ಲಿ ಭಾರತೀಯತೆಯ ವಿಚಾರಗಳನ್ನು ತುಂಬಬೇಕು. ನಮಗೆ ಸ್ವಾತಂತ್ರೃ ದೊರೆತಿರುವುದೇ ನಮ್ಮ ವಿಚಾರಗಳನ್ನು ಪ್ರಚುರಪಡಿಸಲು ಎಂಬುದನ್ನು ನಾವೆಲ್ಲರೂ ನೆನಪಿನಲ್ಲಿಟ್ಟುಕೊಳ್ಳಬೇಕೆಂದರು.
    ಶಿಕ್ಷಕರಿಗೂ ಅನೇಕ ಸಮಸ್ಯೆಗಳಿಗೆ. ಅದರ ಬಗ್ಗೆ ಕೊರಗುತ್ತಾ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರ ಜನಪ್ರತಿನಿಧಿಗಳೊಂದಿಗೆ ಶಿಕ್ಷಕರು ತಮ್ಮ ಹಾಗೂ ತಮ್ಮ ಶಾಲೆಯ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಸರ್ಕಾರದಿಂದ ಬರುವ ಅನುದಾಗಳ ಸ್ಬಳಕೆಯಾಗಬೇಕು. ದಾನಿಗಳ ನೆರವು ಪಡೆಯಬೇಕೆಂದರು.
    ನಾನು ಮೊದಲ ಬಾರಿಗೆ ಶಾಸಕನಾಗಿ 30 ವರ್ಷಗಳ ಬಳಿಕ ನನ್ನ ಕ್ಷೇತ್ರದಲ್ಲಿ 89 ಶಾಲೆಗಳಿಗೆ ಸುಮಾರು 18 ಕೋಟಿ ರೂ. ವೆಚ್ಚದಲ್ಲಿ ಮೂಲ ಸೌಕರ್ಯ ಒದಗಿಸಲು ಸಾಧ್ಯವಾಯಿತು. ಕೇವಲ ಎಂಟು ಮಂದಿಯಿದ್ದ ಕೆಆರ್ ಪುರಂ ಶಾಲೆಯಲ್ಲಿ ಈಗ 300 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರಯತ್ನಪಟ್ಟರೆ ಎಲ್ಲವೂ ಸಾಧ್ಯ ಎಂಬುದಕ್ಕೆ ಇದೊಂದು ನಿದರ್ಶನವಷ್ಟೇ ಎಂದರು.
    ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮೇಯರ್ ಸುನೀತಾ ಅಣ್ಣಪ್ಪ, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಕೆ.ದಿವಾಕರ, ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ವೈ.ಧರ್ಮಪ್ಪ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಬಿ.ರುದ್ರಪ್ಪ, ತಾಲೂಕು ಅಧ್ಯಕ್ಷ ಎಂ.ರವಿ ಮುಂತಾದವರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts