More

    ಸಮರ್ಥವಾಗಿ ತಂತ್ರಜ್ಞಾನ ಬಳಸಿ

    ಬೆಳಗಾವಿ: ಕರೊನಾ ವೈರಸ್ ಪತ್ತೆ, ನಿಯಂತ್ರಣಕ್ಕಾಗಿ ವಿಶ್ವೇಶ್ವರಯ್ಯ ನಗರದಲ್ಲಿನ ಸ್ಮಾರ್ಟ್ ಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಕೋವಿಡ್-19 ವಾರ್ ರೂಮ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹಾಗೂ ಇನ್ನಿತರ ಪ್ರಮುಖ ಜನಪ್ರತಿನಿಧಿಗಳು ಗುರುವಾರ ಚಾಲನೆ ನೀಡಿದರು.

    ನಂತರ ವಾರ್ ರೂಮ್ ಕಾರ್ಯ ಸ್ವರೂಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಜಗದೀಶ ಶೆಟ್ಟರ್, ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ, ಲಭ್ಯವಿರುವ ಅತ್ಯಾಧುನಿಕ ಸೌಲಭ್ಯ ಮತ್ತು ತಂತ್ರಜ್ಞಾನವನ್ನು ಮಾರಕ ಕರೊನಾ ವೈರಸ್ ನಿಯಂತ್ರಣಕ್ಕೆ ಸಮರ್ಥವಾಗಿ ಬಳಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

    ಡಿಸಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಕೋವಿಡ್-19 ನಿಯಂತ್ರಣಾ ಕ್ರಮಗಳ ಉಸ್ತುವಾರಿಯಾದ ವಾಯವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ , ವಾರ್ ರೂಮ್‌ನ ಕಾರ್ಯನಿರ್ವಹಣೆ ಬಗ್ಗೆ ತಿಳಿಸಿದರು.

    ಮೊಬೈಲ್ಆ್ಯಪ್, ವಿಡಿಯೋ ಪುಷ್ ಮತ್ತು ಸರ್ವೇಲನ್ಸ್, ಸೋಂಕಿತರ ಜತೆ ಸಂಪರ್ಕಕ್ಕೆ ಬಂದವರನ್ನು ಮೊಬೈಲ್ ಸಂಖ್ಯೆ ಮೂಲಕ ಪತ್ತೆ ಹಚ್ಚುವಿಕೆ, ಸಾಮಾಜಿಕ ಜಾಲತಾಣಗಳ ಮೂಲಕ ಜನರ ಅಭಿಪ್ರಾಯ ಸಂಗ್ರಹಿಸುವ ಮೂಲಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಬಳಸಲಾಗುತ್ತದೆ. ಕ್ವಾರಂಟೈನ್ ಕೇಂದ್ರ, ಕಂಟೈನ್ಮೆಂಟ್ ಝೋನ್ ಮತ್ತಿತರ ಕಡೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮರಾಗಳನ್ನು ವಾರ್‌ರೂಮ್‌ಗೆ ಸಂಪರ್ಕ ಕಲ್ಪಿಸಲಾಗುವುದು ಎಂದರು. ಕಂಟೈನ್ಮೆಂಟ್ ಝೋನ್‌ಗಳಲ್ಲಿ ಜನರು ಅಗತ್ಯ ವಸ್ತು ಪಡೆಯಲು ಹೊರಗಡೆ ಬರದೆ ವಿಶೇಷ ಆ್ಯಪ್ ಮೂಲಕ ಸಂಬಂಧಪಟ್ಟವರಿಗೆ ಮಾಹಿತಿ ನೀಡಬಹುದು ಎಂದು ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ ತಿಳಿಸಿದರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಎಂಎಲ್‌ಸಿ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಸತೀಶ ಜಾರಕಿಹೊಳಿ, ಡಿ.ಎಂ.ಐಹೊಳೆ, ಮಹಾದೇವಪ್ಪ ಯಾದವಾಡ, ಅನಿಲ ಬೆನಕೆ, ಅಭಯ ಪಾಟೀಲ, ಆರ್‌ಸಿ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶಕುಮಾರ್, ಐಜಿಪಿ ರಾಘವೇಂದ್ರ ಸುಹಾಸ್, ಎಸ್ಪಿ ಲಕ್ಷ್ಮಣ ನಿಂಬರಗಿ, ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ ಸೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts