ಮೂಡಿಗೆರೆ: ನಾನು ಶಾಸಕಿಯಾದ ಬಳಿಕ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಎರಡನೇ ಬಾರಿ ಜನಸಂಪರ್ಕ ಸಭೆ ನಡೆಸುತ್ತಿದ್ದು, ಜನರು ಅಹವಾಲು ಸಲ್ಲಿಸಲು ಕಚೇರಿಯಿಂದ ಕಚೇರಿಗೆ ಅಲೆದಾಡಬಾರದು ಎಂಬ ಉದ್ದೇಶದಿಂದ ಅಧಿಕಾರಿಗಳನ್ನು ಪ್ರತಿ ಗ್ರಾಪಂಗಳಿಗೆ ಕರೆದೊಯ್ದು ಅಹವಾಲು ಸ್ವೀಕರಿಸಿ ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಲಾಗುತ್ತಿದೆ ಎಂದು ಶಾಸಕಿ ನಯನಾ ಮೋಟಮ್ಮ ತಿಳಿಸಿದರು.
ಹೆಸಗಲ್ ಗ್ರಾಪಂನಲ್ಲಿ ನಡೆದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,
ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅಹವಾಲುಗಳಿಗೆ ಪರಿಹಾರ ಒದಗಿಸಲು ಅಧಿಕಾರಿಗಳು ತ್ವರಿತಗತಿಯಲ್ಲಿ ಪ್ರಯತ್ನಿಸಬೇಕು. ದೊಡ್ಡ ಮಟ್ಟದ ಸಮಸ್ಯೆಗಳು ಉಂಟಾದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು. ಸದನದಲ್ಲಿ ಕೂಡ ಚರ್ಚೆ ನಡೆಸಲಾಗುವುದು ಎಂದರು.
ಕಳೆದ ಬಾರಿ ಕುಂದೂರು ಗ್ರಾಪಂ ಜನಸಂಪರ್ಕ ಸಭೆಯಲ್ಲಿ ಚರ್ಚೆಯಾಗಿದ್ದ ಸಾರಗೋಡು ಮೀಸಲು ಅರಣ್ಯ ವ್ಯಾಪ್ತಿಯ 18 ಕುಟುಂಬಗಳ ಪೈಕಿ 16 ಕುಟುಂಬವನ್ನು ಅರಣ್ಯದಿಂದ ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸುವಂತೆ ಒತ್ತಾಯ ಕೇಳಿ ಬಂದ ಹಿನ್ನೆಲೆಯಲ್ಲಿ ಕಳೆದ ಬಾರಿ ಸದನದಲ್ಲಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರೊಂದಿಗೆ ಚರ್ಚಿಸಿ ಹಾದಿಹೋಣಿ ಗ್ರಾಮದ ಸರ್ವೇ ನಂ. 20.21ರಲ್ಲಿ 33.24 ಎಕರೆ ಜಮೀನಿನಲ್ಲಿ ಎಲ್ಲ ಕುಟುಂಬಗಳಿಗೆ 2 ಎಕರೆ ಜಮೀನು ಮತ್ತು ಮನೆ ನಿರ್ಮಿಸಲು 4 ಗಂಟೆ ಸಾಗುವಳಿ ನೀಡಲು ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.
ಅಹವಾಲುಗಳ ತ್ವರಿತ ಇತ್ಯರ್ಥಕ್ಕೆ ಪ್ರಯತ್ನ
ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips
ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…
ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips
ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…
Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?
ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…