More

    ಹಳ್ಳಿಗಳ ಅಭಿವೃದ್ಧಿಗೆ ಶ್ರಮ

    ಮೈಸೂರು : ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗೆ ಶ್ರಮ ವಹಿಸಲಾಗುವುದು ಎಂದು ಸಚಿವ ಕೆ.ವೆಂಕಟೇಶ್ ಭರವಸೆ ನೀಡಿದರು.


    ಕಿತ್ತೂರು ಗ್ರಾಮ ಪಂಚಾಯಿತಿ ಕಾರ್ಯಾಲಯ ಉದ್ಘಾಟನೆ ಅಂಗವಾಗಿ ಇತ್ತೀಚೆಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


    ಕಿತ್ತೂರು ಗ್ರಾಪಂ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಅನುದಾನವನ್ನು ನೀಡಲಾಗಿದೆ. ಮುಂದೆಯೂ ಕೂಡ ಗ್ರಾಮದ ಅಭಿವೃದ್ಧಿಗೆ ಶ್ರಮ ವಹಿಸುತ್ತೇನೆ. ಕಿತ್ತೂರು ಗ್ರಾಪಂ ವ್ಯಾಪ್ತಿಯಲ್ಲಿ ನನಗೆ ಹೆಚ್ಚಿನ ಮತ ಕೊಟ್ಟು ಗೆಲ್ಲಿಸಿದ್ದೀರಿ. ಮತದಾರರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.


    ಶ್ರೀರಂಗಪಟ್ಟಣದ ಹೊರ ವಲಯದಿಂದ ಕುಶಾಲನಗರದ ರಾಣಿ ಗೇಟ್‌ವರೆಗೆ ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಾಣ ಮಾಡಲಾಗುತ್ತಿದೆ. ಆಗ ಬೆಂಗಳೂರಿನಿಂದ ಪಿರಿಯಾಪಟ್ಟಣಕ್ಕೆ ಕೇವಲ ಎರಡೂವರೆ ಗಂಟೆಯಲ್ಲಿ ತಲುಪಬಹುದಾಗಿದೆ. ಸಾರಿಗೆ ವ್ಯವಸ್ಥೆ ಉತ್ತಮವಾದ ನಂತರ ಈ ಭಾಗದಲ್ಲಿ ಕೈಗಾರಿಕೆಗಳು ಹಾಗೂ ದೊಡ್ಡ, ದೊಡ್ಡ ಉದ್ಯಮಗಳು ಬೆಳೆಯಲು ಸಹಕಾರಿಯಾಗುತ್ತದೆ. ಇದರಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ ಎಂದು ವೆಂಕಟೇಶ್ ಅಭಿಪ್ರಾಯಪಟ್ಟರು.


    ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ, ಉಪಾಧ್ಯಕ್ಷ ಪ್ರಭಾವತಿ, ಸದಸ್ಯರಾದ ದಿನೇಶ್, ಕಾವೇರಮ್ಮ, ದೀಪಕ್, ಬೇಲೂರಯ್ಯ, ರಾಜಮಣಿ, ಆರ್.ಎನ್.ಜಗದೀಶ್, ಜಯಶೀಲಾ, ರಂಜಿನಿ, ವಸಂತ್, ಬೋರೇಗೌಡ, ಗಿರಿಜಾ, ಮಹದೇವ, ನಟರಾಜು, ಮಂಜಪ್ಪ, ಗಣೇಶ್, ನಳಿನಿ, ಪಿಡಿಒ ರಾಜಶೇಖರ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts