ಸಾಮಾಜಿಕ ಅನಿಷ್ಟ ನಿವಾರಣೆಗೆ ಶ್ರಮ

kanaka
Published on

ಪಡುಬಿದ್ರಿ: ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿದ ಕನಕದಾಸರು ವಿಶ್ವಮಾನವರಾದರು ಎಂದು ತಹಸೀಲ್ದಾರ್ ಪ್ರತಿಭಾ ಆರ್ ಹೇಳಿದರು.

ಕಾಪು ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ನಿಮ್ಮ ಕುಲದ ನೆಲೆಯನೇನಾದರೂ ಕಂಡಿರಾ ಎಂದು ಪ್ರಶ್ನಿಸಿ ಸಮಾಜದಲ್ಲಿ ಹಾಸುಹೊಕ್ಕಾಗಿದ್ದ ಜಾತಿ ಪದ್ದತಿಗೆ ಸವಾಲು ಹಾಕಿದ್ದ ಮಹಾನ್ ವ್ಯಕ್ತಿ ಶ್ರೀ ಕನಕದಾಸರು. ದಾಸಶ್ರೇಷ್ಠರಾದ ಅವರ ಬದುಕೇ ಮಾನವ ಕುಲಕ್ಕೆ ಒಂದು ಸಂದೇಶ ಎಂದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net