ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲು ಪ್ರಯತ್ನ

29gan3
Published on

ಕುಂದಾಪುರ: ಪೌರ ಕಾರ್ಮಿಕರಿಲ್ಲದೆ ಸ್ವಚ್ಛ ನಗರ, ಪಟ್ಟಣಗಳನ್ನು ಊಹಿಸಲು ಸಾಧ್ಯವಿಲ್ಲ. ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರವಾದುದು. ನಿಮ್ಮ ನ್ಯಾಯಯುತ ಬೇಡಿಕೆಗೆ ನನ್ನ ಬೆಂಬಲವಿದೆ. ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರ ಗಮನಕ್ಕೆ ತಂದು ಬೇಡಿಕೆ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಕಿರಣ್ ಕುವಾರ್ ಕೊಡ್ಗಿ ಹೇಳಿದರು.

ಕುಂದಾಪುರ ಪುರಸಭಾ ಕಚೇರಿ ಮುಂಭಾಗದಲ್ಲಿ ನಡೆಯುತ್ತಿದ್ದ ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ, ಮನವಿ ಸ್ವೀಕರಿಸಿ ಮಾತನಾಡಿದರು.

ವಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್ ವಿ., ಸದಸ್ಯರಾದ ಚಂದ್ರಶೇಖರ್ ಖಾರ್ವಿ, ಶ್ರೀಧರ ಶೇರೆಗಾರ್, ಸಂತೋಷ್‌ಕುವಾರ್ ಶೆಟ್ಟಿ, ಶೇಖರ ಪೂಜಾರಿ, ಕಾಂಗ್ರೆಸ್‌ನ ಇಚ್ಛಿತಾರ್ಥ ಶೆಟ್ಟಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಸಿಪಿಐಎಂನ ನರಸಿಂಹ ಎಚ್. ಮೊದಲಾದವರು ಇದ್ದರು.

ಪೌರಕಾರ್ಮಿಕರ ಪರವಾಗಿ ಎಂಜಿನಿಯರ್ ಗುರುಪ್ರಸಾದ್ ಶೆಟ್ಟಿ, ಆರೋಗ್ಯ ನಿರೀಕ್ಷಕ ರಾವೇಂದ್ರ ನಾಯ್ಕ ಹಾಗೂ ನಾಗರಾಜ ಕುಂದಾಪುರ ಬೇಡಿಕೆಗಳನ್ನು ಶಾಸಕರ ಗಮನಕ್ಕೆ ತಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net