More

    ಕೊಡಗನ್ನು ಮಾದರಿ ಜಿಲ್ಲೆಯನ್ನಾಗಿಸಲು ಶ್ರಮ

    ಕೊಡಗು : ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಹಂತ ಹಂತವಾಗಿ ಅನುದಾನ ನೀಡಿ ಕೊಡಗನ್ನು ಮಾದರಿ ಜಿಲ್ಲೆಯನ್ನಾಗಿಸಲು ಶ್ರಮಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜ್ ಹೇಳಿದರು.

    ಗೋಣಿಕೊಪ್ಪ ತಾಲೂಕಿನ ಬಿಟ್ಟಂಗಾಲ ಹೆಗಡೆ ಸಮಾಜ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ನಾಪೋಕ್ಲು, ವಿರಾಜಪೇಟೆ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


    ಜಿಲ್ಲೆಯು ಬಿಜೆಪಿಯ ನಾಯಕರ ಮುಷ್ಠಿಯಲ್ಲಿ ಇತ್ತು. ಪರಿಣಾಮ ಅಭಿವೃದ್ಧಿ ಶೂನ್ಯವಾಗಿತ್ತು. ನಮ್ಮ ಸರ್ಕಾರ ಆಡಳಿತಕ್ಕೆ ಬಂದಿದ್ದು, ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕಾರ್ಯಕರ್ತರು ಪಕ್ಷದ ಬೆನ್ನೆಲುಬು, ಎಲ್ಲ ವರ್ಗದ ಹಿರಿಯ, ಕಿರಿಯ ಕಾರ್ಯಕರ್ತರನ್ನು ಸಮಾನವಾಗಿ ಕಂಡು ವಿವಿಧ ಸಮಿತಿಗಳಲ್ಲಿ ಸದಸ್ಯರನ್ನಾಗಿ ಆಯ್ಕೆ ಮಾಡಲು ಪಕ್ಷದ ವರಿಷ್ಠರು ಆದೇಶ ನೀಡಿದ್ದಾರೆ ಎಂದು ತಿಳಿಸಿದರು.


    ರಾಜ್ಯದಲ್ಲಿ ಅಕಾಲಿಕ ಮಳೆ, ಬರಗಾಲ ಎದುರಾಗಿದೆ. ರಾಜ್ಯದ ಸಂಸದರಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿ ಮಾಡಿದರು. ಆದರೆ ಇಂದಿನ ವರೆಗೂ ಯಾವುದೇ ಪರಿಹಾರ ಬಂದಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.


    ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, 20ವರ್ಷಗಳಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ಮಂದಗತಿಯಲ್ಲಿ ಸಾಗಿ ಯಾವುದಕ್ಕೂ ಶಾಶ್ವತ ಪರಿಹಾರ ದೊರಕಲು ಸಾಧ್ಯವಾಗಿಲ್ಲ. ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ದೇಶದ ಪ್ರಥಮ ರಾಜ್ಯ ನಮ್ಮದಾಗಿದೆ. ಶಕ್ತಿ ಯೋಜನೆಯಿಂದ ರಾಜ್ಯದಲ್ಲಿ ಮಹಿಳೆಯರು ಲಾಭ ಪಡೆದಿದ್ದಾರೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳಿಂದ ಅನುಕೂಲವಾಗಿದೆ ಎಂದರು.


    ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ಕಾರ್ಯಕರ್ತರು ಪಕ್ಷದ ಒಡನಾಡಿಗಳು. ಕಾರ್ಯಕರ್ತರಿಲ್ಲದೆ ಯಾವುದನ್ನೂ ಸಾಧಿಸಲು ಸಾಧ್ಯವಿಲ್ಲ. ಪಕ್ಷದ ಕಾರ್ಯಕರ್ತರು ಎದೆಗುಂದದೆ ತಮ್ಮ ಅವಿರತ ಶ್ರಮದಿಂದ ಜಿಲ್ಲೆಯ ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆದ್ದಿದೆ. ಕಾರ್ಯಕರ್ತರಿಗೆ ನಾನು ಚಿರಋಣಿಯಾಗಿದ್ದೇನೆ ಎಂದರು.

    ವಿಧಾನ ಪರಿಷತ್ ಮಾಜಿ ಸದಸ್ಯರಾದ ಅರುಣ್ ಮಾಚಯ್ಯ, ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿದರು. ಪೊನ್ನಂಪೇಟೆ ತಾಲೂಕು ಹೊರಾಟಗಾರ ಎರ್ಮುಹಾಜಿ, ಮುಖಂಡರಾದ ಮಂಜುನಾಥ್, ಪಿ.ಕೆ.ಪೊನ್ನಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೆರಿರ ನವೀನ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts