More

    ಗ್ರಾ.ಪಂ. ಸಿಬ್ಬಂದಿ ಬೇಡಿಕೆ ಈಡೇರಿಕೆಗೆ ಪ್ರಯತ್ನ

    ರಾಯಚೂರು: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಸಮಸ್ಯೆಗಳಿಗೆ ಸದಾಕಾಲ ಸ್ಪಂದನೆ ನೀಡುವುದರ ಜತೆಗೆ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದರು.
    ಸ್ಥಳೀಯ ಜಲ ನಿರ್ಮಲ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಗ್ರಾ.ಪಂ. ಸಿಬ್ಬಂದಿಗಳ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವೃಂದವಾರು ಸಮಸ್ಯೆಗಳ ಮಾಹಿತಿ ನೀಡಿದರೆ ಇತ್ಯರ್ಥಗೊಳಿಸಲಾಗುವುದು. ನಮ್ಮ ಹಂತದಲ್ಲಿ ಅವಕಾಶವಿದ್ದರೆ ತಕ್ಷಣ ನಿವಾರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.
    ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ಸ್‌ ಸಂಘದ ಅಧ್ಯಕ್ಷ ಭೀಮರೆಡ್ಡಿ ಪಾಟೀಲ್ ಮಾತನಾಡಿ, ಬಾಕಿ ಇರುವ ಡಿಒ ಅನುಮೋದನೆ, ಬಾಕಿ ವೇತನ, ವರ್ಗಾವಣೆಗೆ ಅವಕಾಶ ಕೊಡಬೇಕು. ರಜೆ ದಿನಗಳಲ್ಲಿ ಕರ್ತವ್ಯಕ್ಕೆ ಕರೆಯಬಾರದು ಎಂದು ಮನವಿ ಮಾಡಿದರು.
    ಕರವಸೂಲಗಾರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ಕಲ್ಪಿಸಬೇಕು. ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಅನುಮೋದನೆ ನೀಡಬೇಕು. ನೌಕರರ ಮೇಲೆ ಹಲ್ಲೆಗಳಾದಾಗ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
    ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಗ್ರಾ.ಪಂ. ನೌಕರರ ಸಂಘದ ಪದಾಕಾರಿಗಳಾದ ವೌನೇಶ ಮಟ್ಟೂರು, ಗುರುಪ್ರಸಾದ, ಜಂಬಯ್ಯ, ಬಸವರಾಜ, ಜಾನಪ್ಪ, ಆಶಣ್ಣ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts