

ಬ್ರಹ್ಮಾವರ: ಕರಾವಳಿ ಜಿಲ್ಲೆಯ ಪ್ರಾಥಮಿಕ ಪತ್ತಿನ ಸಹಕಾರಿಗಳು ರಸಗೊಬ್ಬರದ ಬೇಡಿಕೆಯನ್ನು ಜನವರಿ ತಿಂಗಳಲ್ಲಿ ತಿಳಿಸಿದರೆ ಬೇಕಾದಷ್ಟು ಪೂರೈಕೆ ಮಾಡಲು ಸಾಧ್ಯ ಎಂದು ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಶನಿವಾರ ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘದ(ಟಿ.ಎ.ಪಿ.ಸಿ.ಎಂ.ಎಸ್.)ಬ್ರಹ್ಮಾವರ ತಾಲೂಕು ಸಾಲಿಗ್ರಾಮ ಶಾಖೆಯ ಹವಾನಿಯಂತ್ರಿತ ಶಾಖೆ ಕಟ್ಟಡದ ಉದ್ಘಾಟನೆ ನೆರವೇರಿಸಿದ ಬಳಿಕ ಸಾಲಿಗ್ರಾಮ ಗುರುನರಸಿಂಹ ಸಭಾಭವನದಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರದ ನರೇಗಾದಂತಹ ಯೋಜನೆಯನ್ನು ಸ್ಥಳೀಯ ಸಹಕಾರಿಗಳಿಗೆ ನೀಡುವ ಕುರಿತು ಪ್ರಯತ್ನ ನಡೆಯುತ್ತಿದೆ ಎಂದರು.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವ್ಯವಸಾಯ ಉತ್ಪನ್ನ ಸಹಕಾರಿ ಮಾರಾಟ ಸಂಘ ಕೃಷಿ ಹೊರತಾಗಿ ರೈತರಿಗೆ ಕೃಷಿಯೇತರ ಸಾಲ ನೀಡಿದಲ್ಲಿ ಸಂಘ ಮತ್ತಷ್ಟು ಅಭಿವೃದ್ಧಿ ಕಾಣಲಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ಬಿ.ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಠೇವಣಿಪತ್ರ ಬಿಡುಗಡೆಗೊಳಿಸಿದರು. ದ.ಕ. ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ್ ಹೆಗ್ಡೆ ಕಿಸಾನ್ ಠೇವಣಿಪತ್ರ ಬಿಡುಗಡೆಗೊಳಿಸಿದರು. ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ನಿರ್ದೇಶಕ ಡಾ.ಐ.ದೇವಿಪ್ರಸಾದ್ ಶೆಟ್ಟಿ ಬೆಳಪು ಉಳಿತಾಯ ಖಾತೆ ಪುಸ್ತಕ ವಿತರಿಸಿದರು.
ಇದೇ ಸಂದರ್ಭದಲ್ಲಿ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರನ್ನು ಸನ್ಮಾನಿಸಲಾಯಿತು. ತಾಯಿಯ ಹೆಸರಿನಲ್ಲಿ ಒಂದು ಗಿಡ ಕಾರ್ಯಕ್ರಮದ ಅಂಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಸಸಿ ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್‌ರಾಜ್ ಕಾಂಚನ್, ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಲೆಕ್ಕಪರಿಶೋಧಕಿ ರೇಣುಕಾ ಜಿ., ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ.ಎಸ್.ಕಾರಂತ್, ಕೋಟ ಸಹಕಾರಿ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಕಟ್ಟಡ ಮಾಲೀಕ ರಾಘವೇಂದ್ರ ಹೆಬ್ಬಾರ್, ಮಾಜಿ ಸಹಕಾರಿ ಜಗದೀಶ ಕಾರಂತ, ಸಂಸ್ಥೆಯ ಉಪಾಧ್ಯಕ್ಷ ಕೆ.ನಾರಾಯಣ ಬಲ್ಲಾಳ್ ಕಾರ್ಯದರ್ಶಿ ವಿಜಯಶೀಲ ಹೆಗ್ಡೆ, ಶಾಖಾ ವ್ಯವಸ್ಥಾಪಕ ಪ್ರಸನ್ನ ಶೆಟ್ಟಿ ಮತ್ತು ಎಲ್ಲ ನಿರ್ದೇಶಕರು ಉಪಸ್ಥಿತರಿದ್ದರು.
ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಸ್ವಾಗತಿಸಿದರು. ಸುರೇಶ್ ಕಾರ್ಕಡ ರೈತ ಗೀತೆ ಹಾಡಿದರು. ಸತೀಶಚಂದ್ರ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು. ನಿರ್ದೇಶಕ ಶ್ರೀಧರ ಪಿ.ಎಸ್. ವಂದಿಸಿದರು.
ನಮ್ಮ ಸಂಸ್ಥೆ ಪಡಿತರ ಮತ್ತು ರಸಗೊಬ್ಬರ ಮಾರಾಟದಲ್ಲಿ ರಾಜ್ಯದಲ್ಲಿ ಮಾದರಿಯಾಗಿದ್ದು ಗ್ರಾಹಕರ ಸಹಕಾರದಿಂದ ಎಲ್ಲ ಶಾಖೆಗಳು ಹವಾನಿಯಂತ್ರಿತವಾಗಿ ಯಶಸ್ಸು ಕಂಡಿದೆ. - ಬಿ.ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘದ ಅಧ್ಯಕ್ಷ https://www.vijayavani.net/ready-for-community-building-work https://www.vijayavani.net/balladi-temple-renovation-preparatory-meeting