More

    ರೈತರಿಗೆ ಪರಿಹಾರ ಕೊಡಿಸಲು ಪ್ರಯತ್ನ

    ತರೀಕೆರೆ: ಭದ್ರಾ ಮೇಲ್ದಂಡೆ ಯೋಜನೆಗೆ ಭೂಮಿ ಬಿಟ್ಟುಕೊಟ್ಟಿರುವ ಅಬ್ಬಿನಹೊಳಲು ಹಾಗೂ ಎಂ.ಹೊಸಳ್ಳಿ ಭಾಗದ ರೈತರಿಗೆ ನ್ಯಾಯಯುತ ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಭರವಸೆ ನೀಡಿದರು.
    ತಾಲೂಕಿನ ನರಸೀಪುರ ಗ್ರಾಮದ ಬಳಿ ಹರಿಯುತ್ತಿರುವ ಭದ್ರಾ ಮೇಲ್ದಂಡೆ ನಾಲೆಯಿಂದ ವಿವಿಧ ಗ್ರಾಮಗಳ 50ಕ್ಕೂ ಹೆಚ್ಚು ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
    ಹಿಂದಿನ ಬಾರಿ ಅಧಿಕಾರದಲ್ಲಿದ್ದಾಗ ತಾಲೂಕಿನ 50ಕ್ಕೂ ಹೆಚ್ಚು ಕೆರೆಗಳಿಗೆ ನೀರು ಹರಿಸುವುದೊಂದೇ ಅಲ್ಲ. 20,150 ಹೆಕ್ಟೇರ್ ಕೃಷಿ ಭೂಮಿಗೆ ಹನಿ ನೀರಾವರಿ ವ್ಯವಸ್ಥೆ ಕಲ್ಪಿಸಲು ಅಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಡಿಪಿಆರ್ ತಯಾರಿಸಿ ಅನುಮೋದನೆ ನೀಡಿತ್ತು. ಬಹೂಪಯೋಗಿ ಕಾಮಗಾರಿ ಕಾರ್ಯಗತಗೊಳಿಸಲು ಅಗತ್ಯ ಅನುದಾನ ಒದಗಿಸಿ ರೈತರ ಬೇಡಿಕೆಗೆ ಸ್ಪಂದಿಸಿತ್ತು. ಈ ಬಾರಿ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಗೊಳಿಸುವ ಸಂಕಲ್ಪ ಮಾಡಿದ ಪರಿಣಾಮ ಕೆರೆಗಳಿಗೆ ನಾಲೆ ಮೂಲಕ ನೀರು ಹರಿಸುವ ಪ್ರಯತ್ನ ಸಾಕಾರಗೊಳ್ಳುವಂತಾಗಿದೆ. ಮುಂದಿನ ಹಂಗಾಮಿನಿಂದ 4 ತಿಂಗಳ ಕಾಲ ನೀರು ಬಿಡಲಾಗುವುದು ಎಂದು ತಿಳಿಸಿದರು.
    ಭದ್ರಾ ಮೇಲ್ದಂಡೆ ಯೋಜನೆ ಇಇ ಪ್ರಭಾಕರ್, ಎಇಇ ಪ್ರಕಾಶ್, ಎಇ ಅವಿನಾಶ್‌ಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಪ್ರಮುಖರಾದ ಮಂಜುನಾಥ, ಗುರುಮೂರ್ತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts