More

    ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ಪರಿಹಾರಕ್ಕೆ ಯತ್ನ

    ಕೊಪ್ಪ: ನನ್ನ ಆಡಳಿತಾವಧಿಯಲ್ಲಿ ಶಕ್ತಿಮೀರಿ ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸುತ್ತೇನೆ. ಐದು ವರ್ಷಗಳಲ್ಲಿ ಹೆಚ್ಚು ಉದ್ಯೋಗ ಮೇಳಗಳನ್ನು ನಡೆಸಿ ಉದ್ಯೋಗ ನೀಡುವ ಕೆಲಸ ಮಾಡಲಾಗುತ್ತದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
    ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿ, ಸರ್ಕಾರದಿಂದ ಹೆಚ್ಚು ಉದ್ಯೋಗ ನೀಡಲು ಸಾಧ್ಯವಾಗುವುದಿಲ್ಲ. ಖಾಸಗಿ ಸಂಸ್ಥೆಗಳು ಉದ್ಯೋಗ ನೀಡಬೇಕು. ಪಿ.ವಿ.ನರಸಿಂಹರಾವ್ ಪ್ರಧಾನಿಯಾದ ವೇಳೆ ಮಾಹಿತಿ ತಂತ್ರಜ್ಞಾನಕ್ಕೆ ಅಡಿಪಾಯ ಹಾಕಿದರು. ರಾಜೀವ್ ಗಾಂಧಿ ಪ್ರಧಾನಿಯಾದಾಗ ವಿದೇಶಿ ಕಂಪನಿಗಳಿಗೆ ಆಹ್ವಾನ ನೀಡಿದ ಕಾರಣ ಸದ್ಯ ಐಟಿ, ಬಿಟಿ ಕಂಪನಿಗಳು ದೇಶದಲ್ಲಿವೆ. ಯುವ ಜನತೆಗೆ ಹೆಚ್ಚು ಉದ್ಯೋಗ ಲಭಿಸುವಂತಾಗಿದೆ ಎಂದರು.
    ಪ್ರಾಚಾರ್ಯ ಎಸ್.ಅನಂತ್ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದರು.
    20ಕ್ಕೂ ಅಧಿಕ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದವು. ಬಿಂತ್ರವಳ್ಳಿ ಗ್ರಾಪಂ ಅಧ್ಯಕ್ಷೆ ಜಯಂತಿ, ಪಪಂ ಸದಸ್ಯರಾದ ವಿಜಯ್‌ಕುಮಾರ್, ಮೈತ್ರಾ ಗಣೇಶ್, ಹರಂದೂರು ಗ್ರಾಪಂ ಸದಸ್ಯ ಆನಂದ್, ಜಿಪಂ ಮಾಜಿ ಅಧ್ಯಕ್ಷ ಎಚ್.ಎಂ.ಸತೀಶ್, ಐಕ್ಯೂಎಸಿ ಸಂಚಾಲಕ ಡಾ. ನಿರಂಜನ್, ಜಿಲ್ಲಾ ಉದ್ಯೋಗಾಧಿಕಾರಿ ಪ್ರವೀಣ್, ಜಯಶ್ರೀ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts