More

    ಅರಣ್ಯ ಭೂಮಿಯಲ‍್ಲಿ ಉಳುಮೆ ಮಾಡುತ‍್ತಿದ್ದೀರಾ? ನಿಮಗೂ ಸಿಗಬಹುದು ಬಿಗ್ ರಿಲೀಫ್! ಸಚಿವರು ಹೇಳಿದ್ದಿಷ್ಟು…

    ಮೈಸೂರು: ರಾಜ್ಯದ ಕೆಲ ಭಾಗಗಳಲ್ಲಿ ಕೆಲವರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅರಣ್ಯ ಭೂಮಿ ಎಂದು ಗುರುತಿಸಲಾಗುತ್ತಿದ್ದು ಇದರಿಂದಾಗಿ ಹಕ್ಕುಪತ್ರದ ವಿಚಾರವಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಸದ್ಯದಲ್ಲೇ ಕಾನೂನು ಮಟ್ಟದಲ್ಲೇ ಪರಿಹಾರ ಹುಡುಕುವುದಾಗಿ ಅರಣ್ಯ ಮತ್ತು ಪರಿಸರ ಖಾತೆಯ ಸಚಿವ ಈಶ್ವರ್‍ ಖಂಡ್ರೆ ಭರವಸೆ ನೀಡಿದ್ದಾರೆ.

    ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

    ಇದನ್ನೂ ಓದಿ: ಅರಣ್ಯ ಭೂಮಿಯಲ್ಲಿ ಸಾಗುವಳಿಗೆ ಅವಕಾಶ ನೀಡಿ: ಗಂಗಾವತಿ ಇಲಾಖೆ ಕಚೇರಿ ಮುಂದೆ ಬಸಾಪಟ್ಟಣ ರೈತರ ಪ್ರತಿಭಟನೆ

    ಶಾಸಕ ಅನಿಲ್ ಚಿಕ್ಕಮಾದು ಪಾಲ್ಗೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದದ ಸಚಿವ ಖಂಡ್ರೆ, ಜನರ ಅಹವಾಲಿಗೆ ಸ್ಪಂದಿಸಿದರು. ಈ ಸಂದರ್ಭ, ಡಿ.ಬಿ. ಕುಪ್ಪೆ ವ್ಯಾಪ್ತಿಯಲ್ಲಿ 12 ಕುಟುಂಬಗಳು ಅರಣ್ಯ ವಾಸಿಗಳು ಎಂಬ ಬಗ್ಗೆ ಇರುವ ಗೊಂದಲದ ಬಗ್ಗೆ ತಿಳಿದುಕೊಂಡಿದ್ದಾರೆ. ಸಚಿವರು ಈ ರೀತಿಯೇ ರಾಜ್ಯದಲ್ಲಿ ಇತರರಿಗೂ ಸಮಸ್ಯೆ ಇರುವ ಕಾರಣ, ಪರಿಶೀಲನೆ ಮಾಡಿ ಸೂಕ್ತ ಪರಿಹಾರ ಒದಗಿಸಲು ಶೀಘ್ರವೇ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಭೆ ನಡೆಸುವುದಾಗಿ ಹೇಳಿದ್ದಾರೆ. ಅಲ್ಲಿ, ಇಂತಹ ಸಮಸ್ಯೆ ಇರುವ ರಾಜ್ಯದ ಎಲ್ಲಾ ಹಾಡಿ, ಮುಳುಗಡೆ ಪ್ರದೇಶದ ಸಂತ್ರಸ್ತರ ಜಮೀನುಗಳ ಕುರಿತಂತೆ ಪರ್ಯಲೋಚಿಸುವುದಾಗಿ ಸಚಿವರು ತಿಳಿಸಿದರು.

    ಇದನ್ನೂ ಓದಿ: ಸರ್ಕಾರದ ಆದೇಶವಿದ್ದರೂ ನೀಡುತ್ತಿಲ್ಲ ಹಕ್ಕುಪತ್ರ; ಅರಣ್ಯ ಭೂಮಿ ಸಾಗುವಳಿದಾರರಿಗೆ ಅನ್ಯಾಯ: ತೀ.ನ.ಶ್ರೀನಿವಾಸ್ ಆಕ್ರೋಶ

    ಈ ಸಂದರ್ಭ, ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು, “ನಮ್ಮ ಕ್ಷೇತ್ರದಲ್ಲಿ ಆನೆಗಳ ಹಾವಳಿ ಇದ್ದು ಕನಿಷ್ಠ 72 ಕಿಲೋಮೀಟರ್ ರೈಲ್ವೆ ಬ್ಯಾರಿಕೆಡ್ ನಿರ್ಮಿಸಿ ಕೊಡಿ” ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಸಚಿವರು “ಒಂದೇ ವರ್ಷದಲ್ಲಿ 72 ಕಿಲೋಮೀಟರ್ ಒಂದೇ ಭಾಗದಲ್ಲಿ ನಿರ್ಮಿಸಲು ಸಾಧ್ಯವಿಲ್ಲ, ಆದರೆ ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು” ಎಂದು ತಿಳಿಸಿದರು.

    ತಾವು ಇಂದು ಕಬಿನಿ ವ್ಯಾಪ್ತಿಯ ಅಂತರಸಂತೆ ಅರಣ್ಯ ಪ್ರದೇಶದಲ್ಲಿ ಸೌರಬೇಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ಪರಿಶೀಲಿಸಿದ್ದು ಇದೇ ವೇಳೆ ಅರಣ್ಯದಲ್ಲೇ ವಾಸಿಸುವ ಆದಿವಾಸಿಗಳ ಸಮಸ್ಯೆಯನ್ನು ಆಲಿಸಿದ್ದಾಗಿ ತಿಳಿಸಿದ್ದಾರೆ. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅವರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ನಿಯಮಾನುಸಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

    ಇದನ್ನೂ ಓದಿ: ಅರಣ್ಯ ಭೂಮಿ ಅತಿಕ್ರಮಣ, ಸಕ್ರಮ ಕಾನೂನು ಸರಳೀಕರಣ; ಸಚಿವ ಆರ್.ಅಶೋಕ ಭರವಸೆ

    ಈ ವೇಳೆ ಅರಣ್ಯ ಭೂಮಿಗೆ ಪರ್ಯಾಯವಾಗಿ ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಸಚಿವರು ಪರಿಶೀಲಿಸಿದ್ದಾರೆ. ಈ ವೇಳೆ ಅವರು “3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ 1980ಕ್ಕಿಂತ ಮೊದಲಿನಿಂದಲೂ ಉಳುಮೆ ಮಾಡುತ್ತಿರುವ ಮತ್ತು ಮನೆ ಕಟ್ಟಿಕೊಂಡು ಮೂರು ತಲೆಮಾರಿನಿಂದ ವಾಸಿಸುತ್ತಿರುವವರಿಗೆ ಮಾತ್ರ ಪರಿಹಾರ ಒದಗಿಸುವುದಕ್ಕೆ ಸಂಬಂಧಿಸಿದ ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಎಂದು ಸೂಚಿಸಿದ್ದಾರೆ. ಹೀಗಾಗಿ ಇನ್ನು ಕೆಲವೇ ದಿನಗಳಲ್ಲಿ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಾ ಹಕ್ಕುಪತ್ರದ ಕಾರಣಕ್ಕೆ ಸಂಕಷ್ಟ ಎದುರಿಸುತ್ತಿರುವ ಕೃಷಿಕರಿಗೆ ಶುಭ ಸುದ್ದಿ ಕೇಳಿ ಬರಲಿದೆ.

    ರಾಜ್ಯೋತ್ಸವ ರಸಪ್ರಶ್ನೆ - 21

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts